ಪಶ್ಚಿಮ ಬಂಗಾಳ: ಮಕ್ಕಳ ಕಳ್ಳರೆಂಬ ಶಂಕೆ; ಗಂಗಾ ಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಹಲ್ಲೆ

ಮಕ್ಕಳ ಅಪಹರಣಕಾರರೆದು  ಶಂಕಿಸಿ, ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದೆ.
ಸಾಧುಗಳ ಮೇಲೆ ಹಲ್ಲೆ
ಸಾಧುಗಳ ಮೇಲೆ ಹಲ್ಲೆ

ಲಕ್ನೋ: ಮಕ್ಕಳ ಅಪಹರಣಕಾರರೆದು  ಶಂಕಿಸಿ, ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದ್ದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶ ಮೂವರು ಸಾಧುಗಳ ಮೇಲೆ ದಾಳಿಯಾಗಿದೆ. ನಿನ್ನೆ ಸಂಜೆ ವೇಳೆಗೆ ಜನರ ಗುಂಪು ಹಿಗ್ಗಾಮುಗ್ಗಾ ಹಲ್ಲೆ ನಡೆಸಿ ಅಮಾನವೀಯವಾಗಿ ನಡೆಸಿಕೊಂಡಿದೆ.

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಹಲ್ಲೆಯಾಗಿದ್ದು, ಮಕ್ಕಳ ಕಳ್ಳರು ಎಂದು ಅನುಮಾನ ವ್ಯಕ್ತಪಡಿಸಿದ ಒದೆ ನೀಡಿದ್ದಾರೆ. ಸಾಧುಗಳು ಓರ್ವ ವ್ಯಕ್ತಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ಬಾಡಿಗೆ ವಾಹನದ ಮೂಲಕ ತೆರಳುತ್ತಿದ್ದರು. ಮಕರ ಸಂಕ್ರಾಂತಿ ಹಬ್ಬವನ್ನು ಗಂಗಾಸಾಗರ್​​ನಲ್ಲಿ ಆಚರಣೆ ಮಾಡಲು ಹೋಗುತ್ತಿದ್ದರು.

ಇದು ಅಲ್ಲಿನ ಸ್ಥಳೀಯರಿಗೆ ಅನುಮಾನ ಬಂದಿದೆ. ಜನರ ಗುಂಪು ಬಂದು ಅವರನ್ನು ವಿಚಾರಣೆ ಮಾಡಿದೆ. ನಂತರ ಮನಬಂದಂತೆ ಥಳಿಸಿದ್ದಾರೆ. ವರದಿಗಳ ಪ್ರಕಾರ, ದಾರಿ ಮಧ್ಯೆ ಸಾಧುಗಳಿಗೆ ಹೇಗೆ ಹೋಗಬೇಕು ಎಂಬ ಗೊಂದಲ ಆಗಿದೆ. ಅದಕ್ಕೆ ರಸ್ತೆಯ ಪಕ್ಕದಲ್ಲಿ ಆಡುತ್ತಿದ್ದ ಮೂವರು ಹೆಣ್ಮಕ್ಕಳ ಬಳಿ ಕೇಳಿದ್ದಾರೆ.

ಆದರೆ ಬಾಲಕೀಯರು ಸಾಧುಗಳನ್ನು ನೋಡಿ ಹೆದರಿ ಕಣ್ಣೀರು ಇಡುತ್ತ ಓಡಿ ಹೋಗಿದ್ದಾರೆ. ಇದರಿಂದ ಸ್ಥಳೀಯರಿಗೆ ಅನುಮಾನ ಬಂದಿದೆ. ಕೆಲವು ಸ್ಥಳೀಯ ಇವರು ಅಪಹರಣಕಾರರು ಎಂದು ಆರೋಪಿಸಿ ಆಕ್ರೋಶಗೊಂಡು ಯುವಕರ ಗುಂಪೊಂದು ಸಾಧುಗಳ ಮೇಲೆ ಹಲ್ಲೆ ನಡೆಸಿದೆ.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯ ಪೊಲೀಸರು ಮಧ್ಯ ಪ್ರವೇಶಿಸಿ ಸಾಧುಗಳನ್ನು ರಕ್ಷಿಸಿ ಕಾಸಿಪುರ ಪೊಲೀಸ್ ಠಾಣೆಗೆ ಕರೆದೊಯ್ದರು. ಘಟನೆ ಕುರಿತು ಪ್ರತಿಕ್ರಿಯಿಸಿರುವ ಪುರುಲಿಯಾ ಪೊಲೀಸ್ ವರಿಷ್ಠಾಧಿಕಾರಿ ಅಭಿಜಿತ್ ಬ್ಯಾನರ್ಜಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com