ರಾಮ ಮಂದಿರ ಉದ್ಘಾಟನೆಗೆ ಅಖಿಲೇಶ್ ಯಾದವ್‌ಗೆ ಆಹ್ವಾನ; ಜ. 22ರ ನಂತರ ಅಯೋಧ್ಯೆಗೆ ಭೇಟಿ ನೀಡಲು ನಿರ್ಧಾರ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಜನವರಿ 22 ರಂದು 'ಪ್ರಾಣ ಪ್ರತಿಷ್ಠಾಪನಾ' ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ರಾಮಮಂದಿರ ಟ್ರಸ್ಟ್‌ಗೆ ಶನಿವಾರ ಧನ್ಯವಾದ ತಿಳಿಸಿದ್ದಾರೆ. ಆದರೆ, ಕಾರ್ಯಕ್ರಮದ ನಂತರ ತಮ್ಮ ಕುಟುಂಬದೊಂದಿಗೆ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Updated on: 

ಲಖನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಜನವರಿ 22 ರಂದು 'ಪ್ರಾಣ ಪ್ರತಿಷ್ಠಾಪನಾ' ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ರಾಮಮಂದಿರ ಟ್ರಸ್ಟ್‌ಗೆ ಶನಿವಾರ ಧನ್ಯವಾದ ತಿಳಿಸಿದ್ದಾರೆ. ಆದರೆ, ಕಾರ್ಯಕ್ರಮದ ನಂತರ ತಮ್ಮ ಕುಟುಂಬದೊಂದಿಗೆ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆ ಸಮಾರಂಭಕ್ಕೆ ಖುದ್ದಾಗಿ ಅಥವಾ ಕೊರಿಯರ್ ಮೂಲಕ ಯಾವುದೇ ಆಹ್ವಾನ ಬಂದಿಲ್ಲ ಎಂದು ಯಾದವ್ ಶುಕ್ರವಾರ ಹೇಳಿದ್ದರು ಮತ್ತು ಅದನ್ನು ಅಂಚೆ ಮೂಲಕ ಕಳುಹಿಸಿದ್ದರೆ ಪುರಾವೆ ಒದಗಿಸುವಂತೆ ಕೇಳಿದ್ದರು.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಪತ್ರ ಬರೆದಿರುವ ಎಸ್‌ಪಿ ಮುಖ್ಯಸ್ಥರು ಶನಿವಾರ ಬೆಳಿಗ್ಗೆ ಆಹ್ವಾನ ಸ್ವೀಕರಿಸಿದ್ದು, ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ರಾಯ್ ಅವರಿಗೆ ಧನ್ಯವಾದ ಅರ್ಪಿಸುವ ಪತ್ರವನ್ನು ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಆದರೆ, ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನೆರವೇರಿದ ಬಳಿಕ ಕುಟುಂಬ ಸಮೇತ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com