ಉತ್ತರಾಖಂಡ್ ಯುಸಿಸಿ ಜಾರಿಗೊಳಿಸಲಿರುವ ಮೊದಲ ರಾಜ್ಯವಾಗುವ ಸಾಧ್ಯತೆ: ರಾಜನಾಥ್ ಸಿಂಗ್ 

ಉತ್ತರಾಖಂಡ್ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಮೊದಲ ರಾಜ್ಯವಾಗುವ ಸಾಧ್ಯತೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಸಚಿವ ರಾಜನಾಥ್ ಸಿಂಗ್
ಕೇಂದ್ರ ಸಚಿವ ರಾಜನಾಥ್ ಸಿಂಗ್
Updated on

ಉತ್ತರಾಖಂಡ್: ಉತ್ತರಾಖಂಡ್ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಮೊದಲ ರಾಜ್ಯವಾಗುವ ಸಾಧ್ಯತೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿ 2022 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯ ಪ್ರಮುಖ ಭಾಗವಾಗಿತ್ತು. ಉತ್ತರಾಖಂಡ ಮೂಲದ ಮಂದಿ ಆಯೋಜಿಸಿದ್ದ "ಉತ್ತರಾಯಣಿ ಕೌತಿಕ್" ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, "ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿ ಯಾವುದಾದರೂ ರಾಜ್ಯ ಮೊದಲ ಸ್ಥಾನದಲ್ಲಿದ್ದರೆ ಅದು ಉತ್ತರಾಖಂಡ ಆಗಿರುತ್ತದೆ" ಎಂದು ಹೇಳಿದರು. ಆದರೆ, ಅವರು ಈ ಬಗ್ಗೆ ವಿವರಣೆ ನೀಡಿಲ್ಲ.

ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಆಯ್ಕೆಯಾದ ನಂತರ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಯುಸಿಸಿಯ ಕರಡು ರಚಿಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯನ್ನು ಸ್ಥಾಪಿಸಲು ಒಪ್ಪಿಗೆ ನೀಡಿದ್ದರು.

ಲಕ್ನೋದಲ್ಲಿ ನಡೆದ "ಉತ್ತರಾಯಣಿ ಕೌತಿಕ್" ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವರು, ಉತ್ತರಾಖಂಡವು ಕೇವಲ ದೇವರುಗಳು ಮತ್ತು ವೀರರ ನಾಡು ಮಾತ್ರವಲ್ಲದೆ ಈಗ ಅಭಿವೃದ್ಧಿಯ ನಾಡು ಎಂದು ಗುರುತಿಸಲ್ಪಟ್ಟಿದೆ ಎಂದು ಹೇಳಿದರು.

ಕಳೆದ 5 ವರ್ಷಗಳಲ್ಲಿ ರಾಜ್ಯ ಗಮನಾರ್ಹ ಪ್ರಗತಿ ಸಾಧಿಸಿದೆ. ಉತ್ತರ ಪ್ರದೇಶ ಮತ್ತು ಉತ್ತರಾಖಂಡ ನಡುವಿನ ಸಂಬಂಧವನ್ನು ಉಲ್ಲೇಖಿಸಿದ ಅವರು, "ಉತ್ತರಾಖಂಡವನ್ನು ಉತ್ತರ ಪ್ರದೇಶದಿಂದ ಬೇರ್ಪಡಿಸಿದ ನಂತರ, ಎರಡು ರಾಜ್ಯಗಳ ನಡುವಿನ ಸಂಬಂಧದಲ್ಲಿ ಸ್ವಲ್ಪ ಸಮಯದವರೆಗೆ ಕಹಿ ಇತ್ತು. ಆದರೆ ಇದು ಜನರಲ್ಲಿ ಎಂದಿಗೂ ಕಂಡುಬಂದಿಲ್ಲ." ತೆಲಂಗಾಣವನ್ನು ಆಂಧ್ರಪ್ರದೇಶದಿಂದ ಬೇರ್ಪಡಿಸಿ 10 ವರ್ಷಗಳಾದರೂ ಎರಡು ರಾಜ್ಯಗಳ ನಡುವೆ ಹಲವು ಸಮಸ್ಯೆಗಳು ಬಗೆಹರಿಯದೇ ಹಾಗೆಯೇ ಉಳಿದಿವೆ ಆದರೆ ಉತ್ತರ ಪ್ರದೇಶ ವಿಭಜನೆಯ ನಂತರ ಅಂತಹ ಸಮಸ್ಯೆಗಳು ಆಗಲಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

"ಉತ್ತರ ಪ್ರದೇಶ ಮತ್ತು ಉತ್ತರಾಖಂಡ ನಡುವಿನ ಸಂಬಂಧಗಳು ಎಷ್ಟು ಉತ್ಸಾಹಭರಿತವಾಗಿವೆಯೆಂದರೆ, ಎಲ್ಲಾ ಬಾಕಿ ಉಳಿದಿರುವ ಸಮಸ್ಯೆಗಳ ಹೊರತಾಗಿಯೂ, ಎರಡು ರಾಜ್ಯಗಳಲ್ಲಿ ವಾಸಿಸುವ ಜನರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬದಲಿಗೆ ಸಂಬಂಧಗಳು ಗಟ್ಟಿಯಾಗುತ್ತಲೇ ಇದೇ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com