ರಾಮ ಪ್ರಾಣ ಪ್ರತಿಷ್ಠಾ ನಂತರ ಕುಟುಂಬ ಸಮೇತ ಅಯೋಧ್ಯೆಗೆ ಭೇಟಿ: ಅಖಿಲೇಶ್ ಯಾದವ್

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿರಸ್ಕರಿಸಿದ್ದಾರೆ. ಈ ಮೂಲಕ ದೇವಾಲಯದ ಆಹ್ವಾನ ತಿರಸ್ಕರಿಸಿದ ವಿರೋಧ ಪಕ್ಷದ ನಾಯಕರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ಲಖನೌ: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿರಸ್ಕರಿಸಿದ್ದಾರೆ. ಈ ಮೂಲಕ ದೇವಾಲಯದ ಆಹ್ವಾನ ತಿರಸ್ಕರಿಸಿದ ವಿರೋಧ ಪಕ್ಷದ ನಾಯಕರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಆದರೆ, ನಂತರದ ದಿನಗಳಲ್ಲಿ ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಅವರು ಹೇಳಿದ್ದಾರೆ. 

ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಪಕ್ಷದ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಈಗಾಗಲೇ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದಾರೆ. 

ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಅಖಿಲೇಶ್ ಯಾದವ್ ಪತ್ರ ಬರೆದಿದ್ದು, ಸಮಾರಂಭದಲ್ಲಿ ಗೈರಾಗುತ್ತಿರುವ ಬಗ್ಗೆ ತಿಳಿಸಿದ್ದಾರೆ.

ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಹ್ವಾನ ನೀಡಿದ್ದಕ್ಕಾಗಿ ಮತ್ತು ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದು, ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಖಂಡಿತವಾಗಿಯೂ ಕುಟುಂಬದೊಂದಿಗೆ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com