ನವದೆಹಲಿ: ಇಂದು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 272 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,990ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ನವೀಕೃತ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ದೇಶದಲ್ಲಿ ಸಾವಿನ ಪ್ರಕರಣಗಳು ವರದಿಯಾಗಿಲ್ಲ.
2020ರ ಕೊನೆಯಲ್ಲಿ ಪತ್ತೆಯಾದ ಕೋವಿಡ್ ಸಾಂಕ್ರಾಮಿಕ ದೇಶದಲ್ಲಿ ಮೂರು ಅಲೆಗಳನ್ನು ಸೃಷ್ಟಿಸಿದೆ. ಕಳೆದ ನಾಲ್ಕು ವರ್ಷಳಳಿಂದ ಇಲ್ಲಿಯವರೆಗೆ ಒಟ್ಟು 4.5 ಕೋಟಿ ಮಂದಿಗೆ ಸೋಂಕು ತಗುಲಿದೆ. ಈಪೈಕಿ 4.4 ಕೋಟಿ ಮಂದಿ ಈವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಇದುವರೆಗೆ 220.67 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Advertisement