ರಾಮ ಪ್ರಾಣ ಪ್ರತಿಷ್ಠಾ ದಿನದಂದು ಕಾರ್ಯಕ್ರಮ ಆಯೋಜನೆಗೆ ದೇಣಿಗೆ ಸ್ವೀಕರಿಸುತ್ತಿದ್ದ ವ್ಯಕ್ತಿಯ ಕೊಲೆ!

ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಿಂದು  ಉತ್ತರ ಪ್ರದೇಶದ ಉನ್ನಾವೋದ ದೇವಸ್ಥಾನದಲ್ಲಿ ಕಾರ್ಯಕ್ರಮ ಆಯೋಜನೆಗೆ ದೇಣಿಗೆ ಸಂಗ್ರಹಿಸುತ್ತಿದ್ದ 35 ವರ್ಷದ ಯುವಕನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉನ್ನಾವೋ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಿಂದು  ಉತ್ತರ ಪ್ರದೇಶದ ಉನ್ನಾವೋದ ದೇವಸ್ಥಾನದಲ್ಲಿ ಕಾರ್ಯಕ್ರಮ ಆಯೋಜನೆಗೆ ದೇಣಿಗೆ ಸಂಗ್ರಹಿಸುತ್ತಿದ್ದ 35 ವರ್ಷದ ಯುವಕನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.

ಹತೈಗೈದವರು ಅನ್ಯ ಸಮುದಾಯಕ್ಕೆ ಸೇರಿದವರಾಗಿದ್ದು, ಇದೊಂದು ಕೋಮು ಘಟನೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದಾರೆ. 

 ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಚಂಪಾಪುರದಲ್ಲಿ ನಡೆದ ಜಗಳದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಖಿಲೇಶ್ ಸಿಂಗ್ ಹೇಳಿದ್ದಾರೆ. ದೂರಿನ ಆಧಾರದ ಮೇಲೆ ಕಾಳೇ ಖಾನ್ ಮತ್ತು ಆತನ ಸಹಚರರ ವಿರುದ್ಧ ಗಂಗಾಘಾಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಗಾಯಾಳು ವಿನೋದ್ ಕಶ್ಯಪ್ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಸಿಂಗ್ ಹೇಳಿದರು.

ಕಶ್ಯಪ್ ಅವರ ಪತ್ನಿ ದೂರಿನ ಮೇಲೆ ದಾಖಲಾದ ಎಫ್‌ಐಆರ್ ಉಲ್ಲೇಖಿಸಿದ ಎಸ್ಪಿ ಸಿದ್ಧಾರ್ಥ್ ಶಂಕರ್ ಮೀನಾ, ಧಾರ್ಮಿಕ ನೆಲೆಯಲ್ಲಿ ಘಟನೆ ನಡೆದಿದೆ ಎಂಬುದನ್ನು ನಿರಾಕರಿಸಿದರು. ಕಶ್ಯಪ್ ಮತ್ತು ಅವರ ಸಹಚರರು ಗಂಗಾಘಾಟ್ ಕೊಟ್ವಾಲಿಯಲ್ಲಿ ದೇಣಿಗೆ ಸಂಗ್ರಹಿಸುತ್ತಿದ್ದಾಗ  ದಾಳಿ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ದಾಳಿಕೋರರಲ್ಲಿ ಒಬ್ಬರು ರೌಡಿ  ಶೀಟರ್ ಆಗಿದ್ದು, ಘಟನೆಯ ನಂತರ ಸ್ಥಳೀಯರು ರಸ್ತೆ ತಡೆ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com