ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ವೈಎಸ್ ಶರ್ಮಿಳಾ ರೆಡ್ಡಿ ನೇಮಕ!

ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ರಾಹುಲ್, ಖರ್ಗೆ ಅವರೊಂದಿಗೆ ಶರ್ಮಿಳಾ ರೆಡ್ಡಿ
ರಾಹುಲ್, ಖರ್ಗೆ ಅವರೊಂದಿಗೆ ಶರ್ಮಿಳಾ ರೆಡ್ಡಿ

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದ್ದರಿಂದ ಜನವರಿ 4 ರಂದು ಕಾಂಗ್ರೆಸ್‌ಗೆ ಸೇರಿದ್ದರು. 

ಆಂಧ್ರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ ಒಂದು ದಿನದ ನಂತರ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ. ಆಂಧ್ರ ಪ್ರದೇಶದ ನಿರ್ಗಮಿತ ಪಿಸಿಸಿ ಅಧ್ಯಕ್ಷ ರುದ್ರರಾಜು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರಾಗಿ  ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆ ತಡೆಯಲು ಶರ್ಮಿಳಾ ಅವರ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ನವೆಂಬರ್ 30 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವೈಎಸ್‌ಆರ್‌ಟಿಪಿ ಬೆಂಬಲವನ್ನು ಚುನಾವಣೆಗೂ ಮುನ್ನವೇ ಶರ್ಮಿಳಾ ಘೋಷಿಸಿದ್ದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com