ಗಡಿಯೊಳಗೆ ನುಸುಳಲು ಯತ್ನ: ಪಾಕಿಸ್ತಾನಿ ಪ್ರಜೆ ಬಂಧಿಸಿದ ಬಿಎಸ್ಎಫ್

ಅಕ್ರಮವಾಗಿ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ ಬಂಧಿಸಿದೆ.  ಕಚ್ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಬಳಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಚಲನವಲನವನ್ನು ಗಮಿಸಿಸಿ ಆತನನ್ನು ಬಂಧಿಸಲಾಯಿತು ಎಂದು ಬಿಎಸ್ ಎಫ್ ಹೇಳಿಕೆಯಲ್ಲಿ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಗುಜರಾತ್: ಅಕ್ರಮವಾಗಿ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ ಬಂಧಿಸಿದೆ.  ಕಚ್ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಬಳಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಚಲನವಲನವನ್ನು ಗಮಿಸಿಸಿ ಆತನನ್ನು ಬಂಧಿಸಲಾಯಿತು ಎಂದು ಬಿಎಸ್ ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಬಂಧಿತ ವ್ಯಕ್ತಿಯು ಮಾನಸಿಕವಾಗಿ ಅಸ್ವಸ್ಥನೆಂದು ತೋರುತ್ತದೆ. ಆದರೆ ಆತನ ಗುರುತನ್ನು ಬಹಿರಂಗಪಡಿಸಲು ಸಾಧ್ಯವಾಗುವುದಿಲ್ಲ. ಅವರ ಬಳಿ ಅನುಮಾನಾಸ್ಪದ ಏನೂ ಪತ್ತೆಯಾಗಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪ್ರಮುಖವಾಗಿ, ಮುಂಬರುವ ಗಣರಾಜ್ಯೋತ್ಸವದ ಕಾರಣ ಬಿಎಸ್ಎಫ್ ಎಲ್ಲೆಡೆ ಕಟ್ಟೆಚ್ಚರ ವಹಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com