ರಾಮ ಮಂದಿರ ಉದ್ಘಾಟನೆ: ಜನವರಿ 22 ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
ಅಯೋಧ್ಯೆ ರಾಮಮಂದಿರ
ಅಯೋಧ್ಯೆ ರಾಮಮಂದಿರ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ನೂತನ ವಿಗ್ರಹದ 'ಪ್ರಾಣ ಪ್ರತಿಷ್ಠಾಪನೆ' ಸಮಾರಂಭವನ್ನು ಸೋಮವಾರ ನಿಗದಿಪಡಿಸಲಾಗಿದೆ. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

"ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ದೇಶದಾದ್ಯಂತ 22ನೇ ಜನವರಿ 2024 ರಂದು ಆಚರಿಸಲಾಗುತ್ತಿದೆ. ನೌಕರರು ಸಹ ಈ ಸಂಭ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ದೇಶಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳ ನೌಕರರಿಗೆ ಅರ್ಧ ದಿನ ರಜೆ ನೀಡಲು ನಿರ್ಧರಿಸಲಾಗಿದೆ. 2024 ರ ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ರಜೆ ನೀಡಲಾಗಿದೆ" ಎಂದು ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com