ಡಿಎಂಕೆ ರಾಮಮಂದಿರದ ವಿರೋಧಿಯಲ್ಲ; ಮಸೀದಿ ಕೆಡವಿ, ಮಂದಿರ ನಿರ್ಮಾಣ ಒಪ್ಪಲಾಗದು: ಉದಯನಿಧಿ ಸ್ಟಾಲಿನ್

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಡಿಎಂಕೆ ವಿರೋಧಿಸುವುದಿಲ್ಲ ಆದರೆ ಮಸೀದಿ ಕೆಡವಿ ನಂತರ ದೇವಾಲಯವನ್ನು ನಿರ್ಮಿಸುವುದನ್ನು ಒಪ್ಪಲಾಗದು ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಉದಯನಿಧಿ ಸ್ಟಾಲಿನ್
ಉದಯನಿಧಿ ಸ್ಟಾಲಿನ್

ಚೆನ್ನೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಡಿಎಂಕೆ ವಿರೋಧಿಸುವುದಿಲ್ಲ ಆದರೆ ಮಸೀದಿ ಕೆಡವಿ ನಂತರ ದೇವಾಲಯವನ್ನು ನಿರ್ಮಿಸುವುದನ್ನು ಒಪ್ಪಲಾಗದು ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ, ಆದರೆ ಮಸೀದಿ ಕೆಡವಿ ಮಂದಿರ ಕಟ್ಟುವುದನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ.

ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಕರುಣಾನಿಧಿ ಅವರು ಯಾವಾಗಲೂ ಹೇಳುತ್ತಿದ್ದರು, ಮಂದಿರ ಕಟ್ಟುವುದು ಸಮಸ್ಯೆಯಲ್ಲ, ಆದರೆ ಮಸೀದಿ ಕೆಡವಿ ಅಲ್ಲಿ ಮಂದಿರ ನಿರ್ಮಿಸುವುದನ್ನು ನಾವು ಒಪ್ಪುವುದಿಲ್ಲ, ಆಧ್ಯಾತ್ಮಿಕತೆ ಮತ್ತು ರಾಜಕೀಯವನ್ನು ಬೆರೆಸಬೇಡಿ ಎಂದು ಉದಯನಿಧಿ ತಿಳಿಸಿದ್ದಾರೆ.

1992 ರಲ್ಲಿ ಬಾಬರಿ ಮಸೀದಿ ಧ್ವಂಸವನ್ನು ಉಲ್ಲೇಖಿಸಿದ ಉದಯನಿಧಿ ಸ್ಟಾಲಿನ್ ಅಲ್ಲಿ ದೇವಸ್ಥಾನ ಬರುವುದರಿಂದ ನಮಗೆ ಸಮಸ್ಯೆ ಇಲ್ಲ. ಮಸೀದಿ ಕೆಡವಿದ ನಂತರ ಮಂದಿರ ನಿರ್ಮಾಣಕ್ಕೆ ನಾವು ಒಪ್ಪುವುದಿಲ್ಲ ಎಂದು ಹೇಳಿದರು. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿರುವ ಭವ್ಯ ಮಂದಿರದ ಶಂಕುಸ್ಥಾಪನೆ ಜನವರಿ 22 ರಂದು ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com