ಸಾಂದರ್ಭಿಕ ಚಿತ್ರ
ದೇಶ
ಒಡಿಶಾ: ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ; ಖಾಸಗಿ ಶಾಲೆ ಹೆಡ್ ಮಾಸ್ಟರ್ ಬಂಧನ
ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯೊಂದರ 45 ವರ್ಷದ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರಪಾರಾ: ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯೊಂದರ 45 ವರ್ಷದ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಹೆಡ್ ಮಾಸ್ಟರ್, ಜನವರಿ 16 ರಂದು ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
13 ವರ್ಷದ 7ನೇ ತರಗತಿಯ ಬಾಲಕಿಯರಿಬ್ಬರ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರು ಶಾಲೆಗೆ ಹೋಗಲು ನಿರಾಕರಿಸಿದ್ದು, ಏಕೆ ಶಾಲೆಗೆ ಹೋಗುತ್ತಿಲ್ಲ ಎಂದು ಅವರ ಪೋಷಕರು ಕೇಳಿದಾಗ ಈ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ 376, 354, 506 ಮತ್ತು ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಜಯ ಕುಮಾರ್ ಜೆನಾ ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ