ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಹತ್ಯೆ!

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು  ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯ ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು  ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ರಾಯ ಪುರದಿಂದ 400 ಕಿಮೀ ದೂರದಲ್ಲಿರುವ ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲಂ ಗುಟ್ಟಾ ಬೆಟ್ಟಗಳಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಎನ್ ಕೌಂಟರ್ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ರಾಜ್ಯ ಪೊಲೀಸ್ ನ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಮತ್ತು ಸಿಆರ್ ಪಿಎಫ್ ನ ಆಯ್ದು ಕೋಬ್ರಾ ತಂಡಗಳು ಈ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅವರು ಹೇಳಿದರು.

ಬಲಂ ನೇದ್ರಾ ಅರಣ್ಯದಲ್ಲಿ  ನಕ್ಸಲ್ ಹಿರಿಯ ನಾಯಕರಾದ ವಿನೋದ್ ವರ್ಮಾ, ರಾಜು ಪುಣೆಂ, ವಿಶ್ವನಾಥ್ ಮತ್ತು ಗುಡ್ಡು ತೇಲಂ ಸೇರಿದಂತೆ ಮದ್ದೇಡ್ ಪ್ರದೇಶ ಸಮಿತಿಯ ನಕ್ಸಲ್ ಕಾರ್ಯಕರ್ತರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಂಡಿನ ಚಕಮಕಿ ನಿಂತ ನಂತರ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಎನ್‌ಕೌಂಟರ್ ಸ್ಥಳದಿಂದ ಸ್ಫೋಟಕಗಳು, ಶಸ್ತ್ರಾಸ್ತ್ರಗಳು, ನಕ್ಸಲ್ ಸಮವಸ್ತ್ರ, ಸಾಹಿತ್ಯ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹತ್ಯೆಯಾದ ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ, ಹತ್ತಿರದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com