ದೆಹಲಿಯಲ್ಲಿ ಜನವರಿ 22 ರಂದು ಮಾಂಸದ ಅಂಗಡಿಗಳನ್ನು ಬಂದ್ ಮಾಡವಂತೆ ಮನವಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ದೆಹಲಿಯಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧಿಸುವಂತೆ ದೆಹಲಿ ಮಾಂಸ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಇರ್ಷಾದ್ ಖುರೇಷಿ ಮನವಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ದೆಹಲಿಯಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧಿಸುವಂತೆ ದೆಹಲಿ ಮಾಂಸ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಇರ್ಷಾದ್ ಖುರೇಷಿ ಮನವಿ ಮಾಡಿದ್ದಾರೆ.

ಎರಡು ಸಮುದಾಯಗಳ ನಡುವೆ ಏಕತೆ ಮತ್ತು ಸೌಹಾರ್ದತೆಯನ್ನು ಉತ್ತೇಜಿಸುವುದು ಮತ್ತು ಜನರನ್ನು ಒಟ್ಟಿಗೆ ಸೇರಿಸುವುದು ಈ ಮನವಿಯ ಹಿಂದಿನ ಉದ್ದೇಶವಾಗಿದೆ ಎಂದು ಖುರೇಷಿ ಪಿಟಿಐಗೆ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ "ಪ್ರಾಣ ಪ್ರತಿಷ್ಠಾಪನೆ" ಸಮಾರಂಭಕ್ಕಾಗಿ ಜನರ ಭಾವನೆಗಳನ್ನು ಗೌರವಿಸುವ ಸಲುವಾಗಿ ದೆಹಲಿಯ ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸ, ಮೀನು ಮಾರಾಟದ ಅಂಗಡಿಗಳನ್ನು ಬಂದ್ ಮಾಡುವಂತೆ ಕೇಳಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

"ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ನಮ್ಮ ಹಿಂದೂ ಸಹೋದರ, ಸಹೋದರಿಯರ ಆಚರಣೆಯನ್ನು ಗೌರವಿಸಲು ಜನವರಿ 22 ರಂದು ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸ ಹಾಗೂ ಮೀನು ಮಾರಾಟಗಾರರಿಗೆ ತಮ್ಮ ಅಂಗಡಿಗಳನ್ನು ಬಂದ್ ಮಾಡುವಂತೆ ನಾವು ಮನವಿ ಮಾಡಿದ್ದೇವೆ" ಎಂದು ಖುರೇಷಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com