ಅಯೋಧ್ಯೆ: ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭ; ನಗರಾದಾದ್ಯಂತ ಬಿಗಿ ಭದ್ರತೆ!

ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ  ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಸುಮಾರು 7,000ಕ್ಕೂ ಅಧಿಕ ಗಣ್ಯರು ಸೇರಿದಂತೆ ಸಾವಿರಾರು ಮಂದಿ ರಾಮನ ಭಕ್ತರು ಅಯೋಧ್ಯೆಗೆ ಲಗ್ಗೆ ಇಟ್ಟಿದ್ದು, ಶಾಂತಿ ಸುವ್ಯವಸ್ಥೆಗಾಗಿ ಸೂಕ್ತ ಭದ್ರತೆ ಒದಗಿಸಲಾಗಿದೆ. 
ಅಯೋಧ್ಯೆಯಲ್ಲಿ ಬಿಗಿ ಭದ್ರತೆ
ಅಯೋಧ್ಯೆಯಲ್ಲಿ ಬಿಗಿ ಭದ್ರತೆ

ಅಯೋಧ್ಯೆ: ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವ ಐತಿಹಾಸಿಕ ಶ್ರೀರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ  ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

ಸುಮಾರು 7,000ಕ್ಕೂ ಅಧಿಕ ಗಣ್ಯರು ಸೇರಿದಂತೆ ಸಾವಿರಾರು ಮಂದಿ ರಾಮನ ಭಕ್ತರು ಅಯೋಧ್ಯೆಗೆ ಲಗ್ಗೆ ಇಟ್ಟಿದ್ದು, ಶಾಂತಿ ಸುವ್ಯವಸ್ಥೆಗಾಗಿ ಸೂಕ್ತ ಭದ್ರತೆ ಒದಗಿಸುವ ಮೂಲಕ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ನಗರವನ್ನು ಕ್ರಮವಾಗಿ ಕೆಂಪು ಮತ್ತು ಹಳದಿ ವಲಯಗಳಾಗಿ ವಿಂಗಡಿಸಲಾಗಿದ್ದು, ವಿಶೇಷ ಸಂರಕ್ಷಣಾ ಗುಂಪು (ಎಸ್ ಜಿಪಿ) ರಾಷ್ಟ್ರೀಯ ಭದ್ರತಾ ಪಡೆ, ಬ್ಲ್ಯಾಕ್ ಕ್ಯಾಟ್ ಕಮಾಂಡೋಗಳು, ಕೇಂದ್ರ ಮೀಸಲು ಪಡೆ (ಸಿಆರ್ ಪಿಎಫ್) ಕೋಬ್ರಾ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕ್ಷಿಪ್ರ ಕ್ರಿಯಾಪಡೆ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಘಟಕಗಳನ್ನು ನಗರಾದ್ಯಂತ್ಯ ನಿಯೋಜಿಸಲಾಗಿದೆ.

ನಗರದ ಆಯಕಟ್ಟಿನ ಸ್ಥಳಗಳಲ್ಲಿ A1 ಚಾಲಿತ ಡ್ರೋನ್ ಗಳು, ಎನ್ ಎಸ್ ಜಿ ಸ್ನೈಪರ್ ಗಳನ್ನು ನಿಯೋಜಿಸಲಾಗಿದೆ.  ವಿವಿಧ ಜಿಲ್ಲೆಗಳಿಂದ 100 ಕ್ಕೂ ಹೆಚ್ಚು ಡಿಎಸ್ಪಿಗಳು, 325 ಇನ್ಸ್ ಪೆಕ್ಟರ್ ಮತ್ತು 800 ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 11,000 ಪೊಲೀಸರು, ಮತ್ತು ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವಿಶೇಷ ಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com