ಚೀನಾದಲ್ಲಿ 7.2 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ

ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಪ್ರಬಲ ಕಂಪನದ ಅನುಭವವಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಪ್ರಬಲ ಕಂಪನದ ಅನುಭವವಾಗಿದೆ. 

ಇಂದು ರಾತ್ರಿ 11 ಗಂಟೆಯ ಸುಮಾರಿಗೆ ಚೀನಾದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿಯಲ್ಲೂ ಭೂಮಿ ಕಂಪಿಸಿದೆ. ಯಾವುದೇ ಗಾಯ ಅಥವಾ ನಷ್ಟದ ಬಗ್ಗೆ ವರದಿಯಾಗಿಲ್ಲ. 80 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್ ಮಾಡಿದೆ.

ಕಳೆದ ಜನವರಿ 11 ರಂದು  ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಪರಿಣಾಮ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com