ಇದು ನಿಜವಾದ ಭಾರತ: ಇಂದು ಜನಿಸಿದ ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟ ಮುಸ್ಲಿಂ ಮಹಿಳೆ

ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ದಿನದಂದು ಸೋಮವಾರ ಫಿರೋಜಾಬಾದ್‌ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಆ ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಡುವ ಮೂಲಕ ಹಿಂದೂ-ಮುಸ್ಲಿಂ...
ಪ್ರಾಣ ಪ್ರತಿಷ್ಠಾಪನೆ ಬಳಿಕ ರಾಮಲಲ್ಲಾ ವಿಗ್ರಹ
ಪ್ರಾಣ ಪ್ರತಿಷ್ಠಾಪನೆ ಬಳಿಕ ರಾಮಲಲ್ಲಾ ವಿಗ್ರಹ

ಫಿರೋಜಾಬಾದ್‌: ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ದಿನದಂದು ಸೋಮವಾರ ಫಿರೋಜಾಬಾದ್‌ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಆ ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಡುವ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯ ಸಂದೇಶ ಸಾರಿದ್ದಾರೆ.

ಫರ್ಜಾನಾ ಎಂಬ ಮಹಿಳೆ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಜಿಲ್ಲಾ ಮಹಿಳಾ ಆಸ್ಪತ್ರೆಯ ಪ್ರಭಾರಿ ಡಾ.ನವೀನ್ ಜೈನ್ ಅವರು ತಿಳಿಸಿದ್ದಾರೆ.

ಮಗು ಮತ್ತು ತಾಯಿ ಇಬ್ಬರೂ ಕ್ಷೇಮವಾಗಿದ್ದಾರೆ. "ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟಿರುವುದಾಗಿ ಅಜ್ಜಿ ಹುಸ್ನಾ ಬಾನು ತಿಳಿಸಿರುವುದಾಗಿ" ಅವರು ಎಂದು ಜೈನ್ ಹೇಳಿದ್ದಾರೆ.

ಹಿಂದೂ-ಮುಸ್ಲಿಂ ಏಕತೆಯ ಸಂದೇಶ ನೀಡಲು ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟಿದ್ದೇವೆ ಎಂದು ಬಾನು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com