ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ?: ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕ ಎಂದು ಆಯೋಗ ಸ್ಪಷ್ಟನೆ

ದೆಹಲಿ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯು ಆಂತರಿಕ ಅಧಿಸೂಚನೆ ಬಹಿರಂಗವಾಗಿದ್ದು, ಅದರಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ.
ಭಾರತೀಯ ಚುನಾವಣಾ ಆಯೋಗ
ಭಾರತೀಯ ಚುನಾವಣಾ ಆಯೋಗ

ನವದೆಹಲಿ: ದೆಹಲಿ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯು ಆಂತರಿಕ ಅಧಿಸೂಚನೆ ಬಹಿರಂಗವಾಗಿದ್ದು, ಅದರಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ.

ಈ ಅಧಿಸೂಚನೆಯ ಪ್ರತಿ ವೈರಲ್​​​ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯ ಚುನಾವಣಾ ಆಯೋಗ, ಚುನಾವಣಾ ಆಯೋಗದ ಅಧಿಕಾರಿಗಳ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಚುನಾವಣೆಗೆ ತಯಾರಿ ನಡೆಸಲು ಹಾಗೂ ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಏಪ್ರಿಲ್​​​ 16ರಿಂದ ಲೋಕಸಭೆ ಚುನಾವಣೆಯ ಪ್ರಕಿಯೆಗಳು ಆರಂಭವಾಗಲಿವೆ. ಈ ಕಾರಣಕ್ಕೆ ದೆಹಲಿಯ 11 ಜಿಲ್ಲಾಗಳಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com