ನೇತಾಜಿಗೆ ಏನಾಯಿತು ಎಂದು ಇಂದಿಗೂ ನಮಗೆ ತಿಳಿದಿಲ್ಲ ಎಂಬುದು ನಾಚಿಕೆಗೇಡಿನ ಸಂಗತಿ: ಮಮತಾ ಬ್ಯಾನರ್ಜಿ

ನೇತಾಜಿ ಸುಭಾಷ್ ಚಂದ್ರ ಬೋಸ್ ಕಣ್ಮರೆಯಾಗಿ ಇಷ್ಟು ವರ್ಷಗಳಾದರೂ ಅವರಿಗೆ ಏನಾಯಿತು. ಅವರ ಮರಣದ ದಿನಾಂಕದ ಬಗ್ಗೆ ಜನರಿಗೆ ತಿಳಿದಿಲ್ಲದಿರುವುದು ದೇಶಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಕಣ್ಮರೆಯಾಗಿ ಇಷ್ಟು ವರ್ಷಗಳಾದರೂ ಅವರಿಗೆ ಏನಾಯಿತು. ಅವರ ಮರಣದ ದಿನಾಂಕದ ಬಗ್ಗೆ ಜನರಿಗೆ ತಿಳಿದಿಲ್ಲದಿರುವುದು ದೇಶಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನೇತಾಜಿ ನಾಪತ್ತೆ ಪ್ರಕರಣದ ತನಿಖೆ ನಡೆಸುವ ಭರವಸೆಯನ್ನು ಈಡೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ ಅವರು, ರಾಮ ಮಂದಿರದ ಶಂಕುಸ್ಥಾಪನೆ ಕಾರ್ಯಕ್ರಮಕ್ಕಾಗಿ ಕೇಂದ್ರ ಸರ್ಕಾರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿತ್ತು. ಈ ದಿನಗಳಲ್ಲಿ ರಾಜಕೀಯ ಜಾಹೀರಾತುಗಳಿಗೆ ರಜೆ ಘೋಷಿಸಲಾಗುತ್ತಿದೆ. ಆದರೆ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರಿಗಾಗಿ ಏನನ್ನು ಘೋಷಿಸಿಲ್ಲ ಎಂದರು.

ನೇತಾಜಿಯವರ 127ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬೋಸ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಮಮತಾ, ಇಷ್ಟು ವರ್ಷ ಕಳೆದರೂ ನೇತಾಜಿ ನಿಧನದ ದಿನಾಂಕ ನಮ್ಮ ಬಳಿ ಇಲ್ಲದಿರುವುದು ಭಾರತದ ದೌರ್ಭಾಗ್ಯ ಎಂದರು. ಅವರಿಗೆ ಏನಾಯಿತು ಎಂದು ನಮಗೆ ತಿಳಿದಿಲ್ಲ. ಇದು ಮುಜುಗರದ ಸಂಗತಿ ಎಂದರು.

ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ನೇತಾಜಿ ನಾಪತ್ತೆ ಪ್ರಕರಣದ ತನಿಖೆ ನಡೆಸುವುದಾಗಿ ಭರವಸೆ ನೀಡಿತ್ತು. ಆದರೆ ನಂತರ ಅದನ್ನು ಮರೆತಿದೆ. ನೇತಾಜಿಯವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ನಾನು 20 ವರ್ಷಗಳಿಂದ ಪ್ರಯತ್ನಿಸಿದ್ದೇನೆ. ಆದರೆ ಅದು ವಿಫಲವಾಗಿದೆ, ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com