

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರು ಪೆಡ್ಲರ್ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅಸ್ಸಾಂ ಪೊಲೀಸ್ ವಿಶೇಷ ಕಾರ್ಯಪಡೆಯ ತಂಡ, ಉಪ ನಿರೀಕ್ಷಕ ಪಾರ್ಥಸಾರಥಿ ಮಹಂತ ನೇತೃತ್ವದಲ್ಲಿ ಬಸಿಷ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಬೆಹರ್ಬರಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ, ಕಚ್ಚಾ ರಬ್ಬರ್ ಅಡಿಯಲ್ಲಿ 4,000 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನು ಓದಿ: ಕೋಲಾರ: 50 ಸಾವಿರ ರೂ ಮೌಲ್ಯದ ಗಾಂಜಾ ವಶ, ಮೂವರ ಬಂಧನ
"ನಿಷೇಧಿತ ಈ ಗಾಂಜಾವನ್ನು ತ್ರಿಪುರಾದಿಂದ ಮಧ್ಯ ಭಾರತದ ರಾಜ್ಯಕ್ಕೆ ಸಾಗಿಸಲಾಗುತ್ತಿತ್ತು. ಪೊಲೀಸ್ ತಂಡ 4,000 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದೆ" ಎಂದು ಮಹಂತ ಅವರು ತಿಳಿಸಿದ್ದಾರೆ.
ವಶಪಡಿಸಿಕೊಂಡ ಮಾದಕ ವಸ್ತುವಿನ ಮಾರುಕಟ್ಟೆ ಮೌಲ್ಯ ಅಂದಾಜು 10 ಕೋಟಿ ರೂಪಾಯಿ ಎಂದು ಅವರು ಹೇಳಿದ್ದಾರೆ.
ಕಾರ್ಯಾಚರಣೆಯ ಸಮಯದಲ್ಲಿ, ಇಬ್ಬರು ಪೆಡ್ಲರ್ಗಳನ್ನು ಬಂಧಿಸಲಾಗಿದೆ ಮಹಂತ ಅವರು ತಿಳಿಸಿದ್ದಾರೆ.