ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿ ಬಂಧನ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ

ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಲೋಕಸಭೆ ಚುನಾವಣೆ ನಂತರ ಅವರನ್ನು ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಬುಧವಾರ ಹೇಳಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ
ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ

ಗುವಾಹಟಿ: ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಲೋಕಸಭೆ ಚುನಾವಣೆ ನಂತರ ಅವರನ್ನು ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಬುಧವಾರ ಹೇಳಿದ್ದಾರೆ.

ಮಂಗಳವಾರ ನಡೆದ ಪಕ್ಷದ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ವೇಳೆ ಅಸ್ಸಾಂ ಪೊಲೀಸರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ಹಲವು ನಾಯಕರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

'ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದೇವೆ. ವಿಶೇಷ ತನಿಖಾ ತಂಡ(ಎಸ್‌ಐಟಿ) ಪ್ರಕರಣದ ತನಿಖೆ ನಡೆಸಲಿದೆ ಮತ್ತು ಲೋಕಸಭೆ ಚುನಾವಣೆಯ ನಂತರ ಅವರನ್ನು(ಗಾಂಧಿ) ಬಂಧಿಸಲಾಗುವುದು' ಎಂದು ಅಸ್ಸಾಂ ಸಿಎಂ ಶರ್ಮಾ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣವನ್ನು ಎಸ್‌ಐಟಿ ಮೂಲಕ ಸಮಗ್ರ ತನಿಖೆಗಾಗಿ ಅಸ್ಸಾಂ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು(ಸಿಐಡಿ) ಪೊಲೀಸ್ ಮಹಾನಿರ್ದೇಶಕ ಜಿ ಪಿ ಸಿಂಗ್ ಹೇಳಿದ್ದಾರೆ.

ದೇಶದಲ್ಲಿ ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com