ರಾಮಮಂದಿರ ಕಾರ್ಯಕ್ರಮದ ಬಗ್ಗೆ ಬರಹ: ಜಮ್ಮು-ಕಾಶ್ಮೀರದ ರಜೌರಿ, ರಿಯಾಸಿಯಲ್ಲಿ ಹಲವರ ವಿರುದ್ಧ ಪ್ರಕರಣ

ರಾಮಮಂದಿರ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರಹ ಪೋಸ್ಟ್ ಮಾಡಿದ್ದ ಜಮ್ಮು-ಕಾಶ್ಮೀರದ ರಜೌರಿ, ರಿಯಾಸಿಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
ರಾಮ ಮಂದಿರ
ರಾಮ ಮಂದಿರ
Updated on

ಶ್ರೀನಗರ: ರಾಮಮಂದಿರ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರಹ ಪೋಸ್ಟ್ ಮಾಡಿದ್ದ ಜಮ್ಮು-ಕಾಶ್ಮೀರದ ರಜೌರಿ, ರಿಯಾಸಿಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ರಾಮ ಮಂದಿರದಲ್ಲಿ ವಿಗ್ರಹ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಗಳು ಶಾಂತಿ ಕದಡುವ ಸಾಮರ್ಥ್ಯವಿರುವ ಸೂಕ್ಷ್ಮ ಕಂಟೆಂಟ್ ನ್ನು ಪೋಸ್ಟ್ ಮಾಡಿದ್ದರು. ಇದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಪೊಲೀಸರು ತಮ್ಮ ವಿರುದ್ಧ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ರಿಯಾಸಿಯಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ "ಆಕ್ಷೇಪಾರ್ಹ ವಿಷಯವನ್ನು" ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪೊಲೀಸರು ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಾರೆ.

ಪ್ರದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವಂತಹ ಯಾವುದೇ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡದಂತೆ ಜನರಿಗೆ ಸೂಚಿಸುವಂತೆ ಎಸ್‌ಎಸ್‌ಪಿ ರಿಯಾಸಿ ಅಮಿತ್ ಗುಪ್ತಾ ಸಲಹೆ ನೀಡಿದ್ದಾರೆ.

"ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ವೀಕ್ಷಿಸಲಾಗುತ್ತಿದೆ ಮತ್ತು ಎಲ್ಲಾ ಪೋಸ್ಟ್‌ಗಳು ಮತ್ತು ಕಾಮೆಂಟ್‌ಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಪ್ರಚೋದನಕಾರಿ ಮತ್ತು ದ್ವೇಷವನ್ನು ಹರಡುವ ಯಾವುದನ್ನಾದರೂ ಪೋಸ್ಟ್ ಮಾಡುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಎಸ್‌ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com