ದೇಶ

ಉತ್ತರ ಪ್ರದೇಶ: ಆಟೋ ರಿಕ್ಷಾಗೆ ಕಂಟೈನರ್ ಟ್ರಕ್ ಡಿಕ್ಕಿ, ಭೀಕರ ಅಪಘಾತದಲ್ಲಿ 12 ಮಂದಿ ಸಾವು

ಮಂಜು ಮುಸುಕಿದ ಕಾರಣ ಗೋಚರತೆ ಕಡಿಮೆಯಾದ ಹಿನ್ನೆಲೆಯಲ್ಲಿ ಗುರುವಾರ ಕಂಟೈನರ್ ಟ್ರಕ್‌ ಹಾಗೂ ಆಟೋ-ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 12 ಜನರು...

ಉತ್ತರ ಪ್ರದೇಶ: ಆಟೋ ರಿಕ್ಷಾಗೆ ಕಂಟೈನರ್ ಟ್ರಕ್ ಡಿಕ್ಕಿ, ಭೀಕರ ಅಪಘಾತದಲ್ಲಿ 12 ಮಂದಿ ಸಾವು
ಸಾಂದರ್ಭಿಕ ಚಿತ್ರ
Published On :

ಫರೂಕಾಬಾದ್‌: ಮಂಜು ಮುಸುಕಿದ ಕಾರಣ ಗೋಚರತೆ ಕಡಿಮೆಯಾದ ಹಿನ್ನೆಲೆಯಲ್ಲಿ ಗುರುವಾರ ಕಂಟೈನರ್ ಟ್ರಕ್‌ ಹಾಗೂ ಆಟೋ-ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಟೈನರ್ ಲಾರಿ ಚಾಲಕನ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಪೂರ್ಣಿಮಾ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ಫರೂಕಾಬಾದ್‌ಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಒನ್ ವೇನಲ್ಲಿ ಬಂದ ಟ್ರಕ್ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ನಗರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಅಲಹಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಗ್ಸುಗಿ ಗ್ರಾಮದ ಬಳಿ ಬರೇಲಿ-ಫರೂಕಾಬಾದ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ.

ಜಲಾಲಾಬಾದ್ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಕಂಟೈನರ್ ಡಿಕ್ಕಿ ಹೊಡೆದಿದ್ದು, ಪೂರ್ಣಿಮಾ ಸಂದರ್ಭದಲ್ಲಿ ಗಂಗಾ ಸ್ನಾನಕ್ಕೆ ಫರೂಕಾಬಾದ್‌ನ ಘಾಟಿಯಾ ಘಾಟ್‌ಗೆ ಹೋಗುತ್ತಿದ್ದ 12 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.