ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಪ್ರಮಾಣ ವಚನ ಸ್ವೀಕಾರ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಬಾಲಚಂದ್ರ ವರಾಳೆ
ಬಾಲಚಂದ್ರ ವರಾಳೆ

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಅವರು ಬಾಲಚಂದ್ರ ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಸುಪ್ರೀಂ ಕೋರ್ಟ್ ಕೊಲಿಜಿಯಂ ಜನವರಿ 19ರಂದು ನ್ಯಾಯಮೂರ್ತಿ ವರಾಳೆ ಅವರನ್ನು ಭಾರತದ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು. ಈ ಸಂಬಂಧ ರಾಷ್ಟ್ರಪತಿಗಳು ಜನವರಿ 24ರಂದು ಅಧಿಸೂಚನೆ ಹೊರಡಿಸಿದ್ದರು.

ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಿ ಟಿ ರವಿಕುಮಾರ್ ನಂತರ ದಲಿತ ಸಮುದಾಯದಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮೂರನೇ ನ್ಯಾಯಮೂರ್ತಿ ವರಾಳೆ ಆಗಿದ್ದಾರೆ.

ನ್ಯಾ. ವರಾಳೆ ಅವರು ಪರಿಶಿಷ್ಟ ಜಾತಿಗೆ ಸೇರಿದ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದು, ದೇಶಾದ್ಯಂತ ಇರುವ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.

ನ್ಯಾಯಮೂರ್ತಿ ವರಾಳೆ ಅವರು ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿದ್ದು, ಆರಂಭಿಕ ವರ್ಷಗಳಲ್ಲಿ ವಕೀಲ ಎಸ್ ಎನ್ ಲೋಯಾ ಅವರ ಬಳಿ ಪ್ರಾಕ್ಟೀಸ್‌ ಮಾಡಿದ್ದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.

2008ರ ಜುಲೈ 18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ವರಾಳೆ ಅವರು ಅಕ್ಟೋಬರ್ 15, 2022ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com