ಗಣರಾಜ್ಯೋತ್ಸವದ ಅತಿಥಿ: ಜೈಪುರದಲ್ಲಿಂದು ಮೋದಿ, ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ರೋಡ್‌ ಶೋ

ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ ಇಂದು ದೆಹಲಿಗೆ ಆಗಮಿಸುತ್ತಿದ್ದು, ಪ್ರಧಾನಿ ಮೋದಿ ಮತ್ತು ಮ್ಯಾಕ್ರನ್‌ ಅವರು ಇಂದು ಜೈಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.
ಪ್ರಧಾನಿ ಮೋದಿ-ಮ್ಯಾಕ್ರನ್
ಪ್ರಧಾನಿ ಮೋದಿ-ಮ್ಯಾಕ್ರನ್

ಜೈಪುರ: ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ ಇಂದು ದೆಹಲಿಗೆ ಆಗಮಿಸುತ್ತಿದ್ದು, ಪ್ರಧಾನಿ ಮೋದಿ ಮತ್ತು ಮ್ಯಾಕ್ರನ್‌ ಅವರು ಇಂದು ಜೈಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ (Republic Day 2024) ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ (Emmanuel Macron) ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಗುರುವಾರವೇ (ಜನವರಿ 25) ಜೈಪುರಕ್ಕೆ ಇಮ್ಯಾನುಯೆಲ್‌ ಮ್ಯಾಕ್ರನ್‌ ಆಗಮಿಸಲಿದ್ದು, ನರೇಂದ್ರ ಮೋದಿ (Narendra Modi) ಅವರು ಸ್ವಾಗತಿಸಲಿದ್ದಾರೆ. 

ಪ್ರಧಾನಿ ಮೋದಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೈಪುರದಲ್ಲಿ ಸಭೆ ನಡೆಸಲಿದ್ದು, ಈ ಸಭೆಗೂ ಮುನ್ನ ಉಭಯ ನಾಯಕರು ಸಂಜೆ ಜೈಪುರದಲ್ಲಿ ಭರ್ಜರಿ ರೋಡ್‌ ಶೋ ಕೂಡ ನಡೆಸಲಿದ್ದಾರೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ಮೂಲಕ ಇಂತಹ ಆತಿಥ್ಯ ಸ್ವೀಕರಿಸಿದ ಫ್ರಾನ್ಸ್‌ನ ಆರನೇ ನಾಯಕ ಎಂಬ ಖ್ಯಾತಿಗೆ ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರು ಭಾಜನರಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 2023ರ ಜುಲೈನಲ್ಲಿ ಫ್ರಾನ್ಸ್‌ನಲ್ಲಿ ನಡೆದ ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗೌರವ ಸ್ವೀಕರಿಸಿದ್ದರು. ಈಗ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರು ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಗಣರಾಜ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಮೋದಿ ಹಾಗೂ ಮ್ಯಾಕ್ರನ್‌ ಅವರ ಕಾರ್ಯಕ್ರಮದ ಸಮಯ, ಸ್ಥಳ ಸೇರಿ ಹಲವು ಮಾಹಿತಿ ಇಲ್ಲಿದೆ.
ಮಧ್ಯಾಹ್ನ 2.30ಕ್ಕೆ ಜೈಪುರ ವಿಮಾನ ನಿಲ್ದಾಣಕ್ಕೆ ಇಮ್ಯಾನುಯೆಲ್‌ ಮ್ಯಾಕ್ರನ್‌ ಆಗಮಿಸಲಿದ್ದು, ಸಂಜೆ 5.30ಕ್ಕೆ ಮ್ಯಾಕ್ರನ್‌ ಅವರನ್ನು ಸ್ವಾಗತಿಸಲಿರುವ ಮೋದಿ, ಹಲವು ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಜಂತರ್‌ ಮಂತರ್‌ನಿಂದ ಸಂಗನೇರಿ ಗೇಟ್‌ವರೆಗೆ ಮೋದಿ-ಮ್ಯಾಕ್ರನ್‌ ರೋಡ್‌ ಶೋ ನಡೆಸಲಿದ್ದು, ಈ ವೇಳೆ ಮಾರ್ಗ ಮಧ್ಯೆ ಉಭಯ ನಾಯಕರು ಜನರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸಂಜೆ 7 ಗಂಟೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಉಭಯ ನಾಯಕರು, ರಾತ್ರಿ 8.50ಕ್ಕೆ ಮ್ಯಾಕ್ರನ್ ಜೈಪುರದಿಂದ ದೆಹಲಿಗೆ ಪ್ರಯಾಣ ಆರಂಭಿಸಲಿದ್ದಾರೆ.

ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್‌ ಮ್ಯಾಕ್ರನ್‌ ಪಾಲ್ಗೊಳ್ಳಲಿದ್ದಾರೆ. ಗಣರಾಜ್ಯೋತ್ಸವದ ಬಳಿಕ ಅವರು ಫ್ರಾನ್ಸ್‌ ರಾಯಭಾರ ಕಚೇರಿಗೆ ಭೇಟಿ ನೀಡಲಿರುವ ಅವರು, ಅಲ್ಲಿನ ಸಿಬ್ಬಂದಿ ಜತೆ ಮಾತುಕತೆ ನಡೆಸಿದ್ದಾರೆ. ಸಂಜೆ 7.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಫ್ರಾನ್ಸ್‌ ಅಧ್ಯಕ್ಷ ಭೇಟಿಯಾಗಲಿದ್ದಾರೆ. ಇದಾದ ಬಳಿಕ ರಾಷ್ಟ್ರಪತಿ ಭವನದಲ್ಲಿ ರಾತ್ರಿ ನಡೆಯುವ ಭೋಜನ ಕೂಟದಲ್ಲಿ ಫ್ರಾನ್ಸ್‌ ಅಧ್ಯಕ್ಷ ಊಟ ಮಾಡಲಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com