INDIA ಮೈತಿಕೂಟದೊಂದಿಗೆ ದೃಢವಾಗಿದ್ದೇವೆ, ಆದರೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ: ಜೆಡಿಯು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು "ಇಂಡಿಯಾ ಮೈತ್ರಿಕೂಟದೊಂದಿಗೆ ದೃಢವಾಗಿದೆ". ಆದರೆ ಕಾಂಗ್ರೆಸ್ ಮಿತ್ರ ಪಕ್ಷಗಳ ಬಗ್ಗೆ ಮತ್ತು ಸೀಟು ಹಂಚಿಕೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಶುಕ್ರವಾರ...
ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್
ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು "ಇಂಡಿಯಾ ಮೈತ್ರಿಕೂಟದೊಂದಿಗೆ ದೃಢವಾಗಿದೆ". ಆದರೆ ಕಾಂಗ್ರೆಸ್ ಮಿತ್ರ ಪಕ್ಷಗಳ ಬಗ್ಗೆ ಮತ್ತು ಸೀಟು ಹಂಚಿಕೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಶುಕ್ರವಾರ ಜೆಡಿಯು ಹೇಳಿದೆ.

ರಾಜ್ಯ ಜೆಡಿಯು ಅಧ್ಯಕ್ಷ ಉಮೇಶ್ ಸಿಂಗ್ ಕುಶ್ವಾಹ ಅವರು ಈ ಹೇಳಿಕೆ ನೀಡಿದ್ದು, ನಿತೀಶ್ ಕುಮಾರ್ ನೇತೃತ್ವದ ತಮ್ಮ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಲಿದೆ ಎಂಬುದು ಕೇವಲ ವದಂತಿ ಎಂದಿದ್ದಾರೆ.

"ಬಿಹಾರದ ಆಡಳಿತರೂಢ ಮಹಾಘಟಬಂಧನ್‌ನಲ್ಲಿ ಎಲ್ಲವೂ ಚೆನ್ನಾಗಿದೆ ಮತ್ತು ಮಾಧ್ಯಮಗಳ ವರದಿ ಕೇವಲ ಊಹಾಪೋಹ" ಎಂದು ಕುಶ್ವಾಹ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿನ್ನೆ ಹಾಗೂ ಇಂದು ಸಿಎಂ ಅವರನ್ನು ಭೇಟಿ ಮಾಡಿದ್ದೇನೆ. ಇದು ಮಾಮೂಲಿ ವಿಷಯ. ಹರಿದಾಡುತ್ತಿರುವ ವದಂತಿಗಳಲ್ಲಿ ಯಾವುದೇ ಸತ್ಯವಿಲ್ಲ. ಪಕ್ಷದ ಶಾಸಕರನ್ನು ಪಾಟ್ನಾಗೆ ಬರುವಂತೆ ಸೂಚಿಸಲಾಗಿದೆ ಎಂಬುದು ಸಹ ಕೇವಲ ವದಂತಿ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಸ್ಪರ ದೂರ ಸ್ವಲ್ಪ ದೂರ ಕುಳಿತಿದ್ದರೂ "ನಾವು ಭಾರತ ಒಕ್ಕೂಟದೊಂದಿಗೆ ದೃಢವಾಗಿದ್ದೇವೆ" ಎಂದು ಕುಶ್ವಾಹ ಪ್ರತಿಪಾದಿಸಿದರು.

ಆದಾಗ್ಯೂ, "ನಮ್ಮ ಮೈತ್ರಿಕೂಟದ ಪಾಲುದಾರ ಪಕ್ಷ ಕಾಂಗ್ರೆಸ್, ಇತರ ಪಕ್ಷಗಳ ಕುರಿತ ತನ್ನ ನಿಲುವು ಮತ್ತು ಸ್ಥಾನಗಳ ಹಂಚಿಕೆಗೆ ಸಂಬಂಧಿಸಿದಂತೆ ಸ್ವಲ್ಪ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ನಮ್ಮ ನಾಯಕ ನಿತೀಶ್ ಕುಮಾರ್ ಬಹಳ ಹಿಂದಿನಿಂದಲೂ ಸೀಟು ಹಂಚಿಕೆ ಅಂತಿಮಗೊಳಿಸುವಿಕೆಯ ಅಗತ್ಯವನ್ನು ಒತ್ತಿಹೇಳುತ್ತಿದ್ದಾರೆ. ಸೀಟು ಹಂಚಿಕೆ ಒಪ್ಪಂದದ ಮೂಲಕ ನಾವು ಲೋಕಸಭೆ ಚುನಾವಣೆಯ ಮೇಲೆ ಗಮನಹರಿಸಬಹುದು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com