ಲೋಕಸಭಾ ಚುನಾವಣೆ: ಉತ್ತರ ಪ್ರದೇಶದಲ್ಲಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೊಂದಿಗೆ ಎಸ್ಪಿ ಮೈತ್ರಿ-ಅಖಿಲೇಶ್ ಯಾದವ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಮೈತ್ರಿ ಕುರಿತ ಮಹತ್ವದ ಮಾಹಿತಿ ಹೊರಬಂದಿದೆ.
ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಸಾಂದರ್ಭಿಕ ಚಿತ್ರ
ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಸಾಂದರ್ಭಿಕ ಚಿತ್ರ

ಲಖನೌ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಮೈತ್ರಿ ಕುರಿತ ಮಹತ್ವದ ಮಾಹಿತಿ ಹೊರಬಂದಿದೆ.

ಈ ವಿಷಯವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಅಖಿಲೇಶ್ ಯಾದವ್, ರಾಜ್ಯದ 11 ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೊಂದಿಗೆ ಸಮಾಜವಾದಿ ಪಕ್ಷದ ಮೈತ್ರಿಯು ಉತ್ತಮ ಬೆಳವಣಿಯಾಗಿದೆ. ಈ ಮೂಲಕ ಗೆಲುವು ಸಾಧಿಸಲು ಅನುಕೂಲವಾಗಲಿದೆ. ಇಂಡಿಯಾ ಮೈತ್ರಿಕೂಟದ ಕಾರ್ಯತಂತ್ರ ದೇಶದಲ್ಲಿ ಹೊಸ  ಚರಿತ್ರೆ ಬರೆಯಲಿದೆ ಎಂದು ಅವರು ಹೇಳಿದ್ದಾರೆ.

ನಂತರ ಪ್ರತಿಕ್ರಿಯಿಸಿದ ಕಾಂಗ್ರೆಸ್, ಪಕ್ಷದ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನಡುವೆ ರಚನಾತ್ಮಕ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ. ಸೂತ್ರ ಅಂತಿಮಗೊಂಡಾಗ ತಿಳಿಸುವುದಾಗಿ ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com