ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ

ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗಿಂತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 
ಸುಧೀಂದ್ರ ಕುಲಕರ್ಣಿ
ಸುಧೀಂದ್ರ ಕುಲಕರ್ಣಿ

ಮುಂಬೈ: ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗಿಂತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

ಈ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆಗೆ ಬದ್ಧವಾಗಿದ್ದು, ಕ್ಷಮೆಯಾಚಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದಿದ್ದಾರೆ.  ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ರಚಿಸಿದವರು ಎಂದು ಭಾವಿಸಲಾಗಿದೆ. ಆದರೆ,  ಈ ಬಗ್ಗೆ ಸಂಶೋಧನೆ ಮಾಡಿದ್ದು, ಇತಿಹಾಸದ ವಾಸ್ತವಾಂಶ ಪರಿಶೀಲಿಸಿದರೆ ಅದು ಸುಳ್ಳು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ. 

ಈ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಸುಧೀಂದ್ರ ಕುಲಕರ್ಣಿ ಬರೆದಿದ್ದ ಲೇಖನದ ಲಿಂಕ್ ನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದರು. ನಂತರ ಅದನ್ನು ಡಿಲೀಟ್ ಮಾಡಿದ್ದರು. ಲೇಖನದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ, ದಲಿತರು ಹಾಗೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಟೀಕಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com