ಮಹಾಘಟಬಂಧನ ಮೈತ್ರಿ ಮುರಿದು ಸಿಎಂ ಸ್ಥಾನಕ್ಕೆ ರಾಜೀನಾಮೆ: ನಿತೀಶ್ ಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಇಂದು ಭಾನುವಾರ ಸಂಜೆ ವೇಳೆಗೆ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಬಹುತೇಕ ನಿಚ್ಛಳವಾಗಿದೆ.
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಇಂದು ಭಾನುವಾರ ಸಂಜೆ ವೇಳೆಗೆ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಬಹುತೇಕ ನಿಚ್ಛಳವಾಗಿದೆ.

ಇಂದು ಬೆಳಗ್ಗೆ ರಾಜ್ಯಪಾಲ ರಾಜೇಂದ್ರ ವಿ ಅರ್ಲೇಕರ್ ಅವರಿಗೆ ನಿತೀಶ್ ಕುಮಾರ್ ಅವರು ರಾಜೀನಾಮೆ ಪತ್ರ  ಸಲ್ಲಿಸಿದರು. ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲರು ಸೂಚಿಸಿದರು.

ನಿತೀಶ್ ಕುಮಾರ್ ಅವರಿಗೆ ಪ್ರಧಾನಿ ಅಭಿನಂದನೆ: ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ  ನಿತೀಶ್ ಕುಮಾರ್ ಅವರು ರಾಜ್ಯಪಾಲರ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ನಿತೀಶ್ ಕುಮಾರ್ ಅವರಿಗೆ ಕರೆ ಮಾಡಿ ಎನ್ ಡಿಎ ಮೈತ್ರಿಕೂಟದ ಭಾಗವಾಗುತ್ತಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ. 

ಹೊಸ ಸರ್ಕಾರ ರಚನೆಯಾಗುವವರೆಗೂ ನಿತೀಶ್‌ ಕುಮಾರ್ ಅವರಿಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com