ಇಂದು ಸಂಜೆ 5 ಗಂಟೆಗೆ 9 ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ: ಇಬ್ಬರು ಡಿಸಿಎಂಗಳು

72 ವರ್ಷದ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಬಿಹಾರದಲ್ಲಿ ನೂತನ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಈ ಮೂಲಕ ಅವರು 9ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಗದ್ದುಗೆ ಏರುತ್ತಿದ್ದಾರೆ.
ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಿತೀಶ್ ಕುಮಾರ್
ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಿತೀಶ್ ಕುಮಾರ್
Updated on

ಪಾಟ್ನಾ: 72 ವರ್ಷದ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಬಿಹಾರದಲ್ಲಿ ನೂತನ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಈ ಮೂಲಕ ಅವರು 9ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಗದ್ದುಗೆ ಏರುತ್ತಿದ್ದಾರೆ. ಇಂದು ಭಾನುವಾರ ಸಂಜೆ 5 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಲಿದ್ದು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ನಿತೀಶ್ ಕುಮಾರ್ ಅವರ ಜೊತೆಗೆ ಇಬ್ಬರು ಬಿಜೆಪಿ ಶಾಸಕರಾದ ವಿಜಯ್ ಸಿನ್ಹಾ ಮತ್ತು ಸಾಮ್ರಾಟ್ ಚೌಧರಿಯವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಇಂದು ಬೆಳಗ್ಗೆ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಬೆಂಬಲ ಪತ್ರವನ್ನು ಇದೇ ಸಂದರ್ಭದಲ್ಲಿ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. 

ಇಂದು ಬೆಳಗ್ಗೆ ನಡೆದ ಜನತಾ ದಳ (ಸಂಯುಕ್ತ) ಶಾಸಕಾಂಗ ಸಭೆಯಲ್ಲಿ ನಿತೀಶ್ ಕುಮಾರ್ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದರು. ಮಹಾಘಟಬಂಧನ ಮೈತ್ರಿ ಮುರಿದು ಜೆಡಿಯು ರಾಜೀನಾಮೆ ನೀಡಿದ ನಂತರ ಬಿಜೆಪಿಯು ತನ್ನ ಶಾಸಕರು ಮತ್ತು ಎಂಎಲ್‌ಸಿಗಳೊಂದಿಗೆ ನಿತೀಶ್ ಕುಮಾರ್‌ಗೆ ತನ್ನ ಬೆಂಬಲ ಪತ್ರವನ್ನು ನೀಡಿತು. ಇದಲ್ಲದೆ, ಪಕ್ಷದ ಬಿಹಾರ ಉಸ್ತುವಾರಿ ವಿನೋದ್ ತಾವ್ಡೆ ಅವರು ನೂತನ ಉಪ ಮುಖ್ಯಮಂತ್ರಿಗಳಾಗಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಆಯ್ಕೆಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮತ್ತು ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಸಮರ್ಥ ಮಾರ್ಗದರ್ಶನದಲ್ಲಿ ಇಬ್ಬರೂ ಬಿಹಾರದ ಸುಧಾರಣೆಗಾಗಿ ಕೆಲಸ ಮಾಡುತ್ತಾರೆ ಎಂದು ನಮಗೆ ನಂಬಿಕೆಯಿದೆ ಎಂದು ವಿನೋದ್ ತಾವ್ಡೆ ಅವರು ಟ್ವೀಟ್ ಮಾಡಿದ್ದಾರೆ. 

ನಿತೀಶ್ ಕುಮಾರ್ ಅವರನ್ನು ಬಿಹಾರದಲ್ಲಿ ಎನ್‌ಡಿಎ ಮುಖ್ಯಸ್ಥರನ್ನಾಗಿಯೂ ನೇಮಿಸಲಾಗಿದೆ. ಸಿಎಂ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿಕೂಟವನ್ನು ವಿಸರ್ಜಿಸುವಂತೆ ರಾಜ್ಯಪಾಲರನ್ನು ಕೋರಿದ್ದೇನೆ.

ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ (RJD), ಕಾಂಗ್ರೆಸ್ ಮತ್ತು ಮೂರು ಎಡಪಕ್ಷಗಳನ್ನು ಒಳಗೊಂಡಿರುವ ಮಹಾಘಟಬಂಧನ್ ಮೈತ್ರಿಯಲ್ಲಿನ ಪರಿಸ್ಥಿತಿ ಸರಿಯಾಗಿರಲಿಲ್ಲ ಇದರಿಂದಾಗಿ ಮೈತ್ರಿ ತೊರೆಯಬೇಕಾದ ಪರಿಸ್ಥಿತಿ ಬಂತು ಎಂದಿದ್ದಾರೆ. 

"(ಮಹಾಘಟಬಂಧನ್ ಮೈತ್ರಿಯಲ್ಲಿ) ಪರಿಸ್ಥಿತಿ ಸರಿಯಿಲ್ಲದ ಕಾರಣ ನಾನು ಬಹಳ ಸಮಯದಿಂದ ಯಾವುದರ ಬಗ್ಗೆಯೂ ಪ್ರತಿಕ್ರಿಯಿಸುತ್ತಿಲ್ಲ, ನನ್ನ ಪಕ್ಷದ ಕಾರ್ಯಕರ್ತರು ಸೇರಿದಂತೆ ಎಲ್ಲರ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಪಡೆದು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ. 

ಇಂದು ಸಂಜೆ 5 ಗಂಟೆಗೆ ನಡೆಯಲಿರುವ ನಿತೀಶ್ ಕುಮಾರ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಸದ್ಯಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಸಂಜೆ 4:15 ರ ಸುಮಾರಿಗೆ ಪಾಟ್ನಾಗೆ ಆಗಮಿಸಲಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಂಭ್ರಮ: ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳದ ಜೊತೆ ಸೇರಿ ಸರ್ಕಾರ ರಚಿಸುತ್ತಿರುವ ಹೊತ್ತಿನಲ್ಲಿ ಬಿಜೆಪಿ ಕಾರ್ಯಕರ್ತರು ಪಾಟ್ನಾದಲ್ಲಿ ನಿತೀಶ್ ಕುಮಾರ್ ನಿವಾಸದ ಹೊರಗೆ ಸಂಭ್ರಮಾಚರಣೆ ಮಾಡುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com