ಹಿಂದೂ ದೇವರನ್ನು ನಂಬಬೇಡಿ; ಬೌದ್ಧ ಧರ್ಮ ಅಳವಡಿಸಿಕೊಳ್ಳುವಂತೆ ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿದ ಮುಖ್ಯ ಶಿಕ್ಷಕನ ಬಂಧನ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಛತ್ತೀಸ್‌ಗಢ ಪೊಲೀಸರು ಬಿಲಾಸ್‌ಪುರದ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕರನ್ನು ಬಂಧಿಸಿದ್ದಾರೆ. ರಾಮಲಲ್ಲಾ ಅವರ ಪಟ್ಟಾಭಿಷೇಕ ಸಮಾರಂಭದ ದಿನದಂದು, ಹಿಂದೂ ದೇವರುಗಳನ್ನು ನಂಬುವುದಿಲ್ಲ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬಿಲಾಸ್ಪುರ್: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಛತ್ತೀಸ್‌ಗಢ ಪೊಲೀಸರು ಬಿಲಾಸ್‌ಪುರದ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕರನ್ನು ಬಂಧಿಸಿದ್ದಾರೆ. ರಾಮಲಲ್ಲಾ ಅವರ ಪಟ್ಟಾಭಿಷೇಕ ಸಮಾರಂಭದ ದಿನದಂದು, ಹಿಂದೂ ದೇವರುಗಳನ್ನು ನಂಬುವುದಿಲ್ಲ ಮತ್ತು ಬೌದ್ಧ ಧರ್ಮವನ್ನು ಅಳವಡಿಸಿಕೊಳ್ಳುವುದಾಗಿ ಹೆಡ್ ಮಾಸ್ಟರ್ ಜನರಿಗೆ ಪ್ರಮಾಣ ವಚನ ಬೋಧಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರ 60 ವರ್ಷದ ಮುಖ್ಯೋಪಾಧ್ಯಾಯ ನಾನು ಹಿಂದೂ ದೇವರುಗಳನ್ನು ನಂಬುವುದಿಲ್ಲ. ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಎಂದು ಪ್ರಮಾಣ ವಚನ ಬೋಧಿಸಿದ ನಂತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 22ರಂದು ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪಿಸುತ್ತಿರುವಾಗ, ಆರೋಪಿ ಮುಖ್ಯಸ್ಥರು ಮೊಹ್ತರಾಯ್ ಗ್ರಾಮದಲ್ಲಿ ಮಕ್ಕಳು ಮತ್ತು ಜನರ ಗುಂಪನ್ನು ಒಟ್ಟುಗೂಡಿಸಿದರು. ಇದಾದ ನಂತರ ಅವರಿಗೆ ಹಿಂದೂ ದೇವರುಗಳನ್ನು ನಾವು ಪೂಜಿಸುವುದಿಲ್ಲ. ಬೌದ್ಧ ಧರ್ಮವನ್ನು ಅನುಸರಿಸುತ್ತೇವೆ ಎಂದು ಪ್ರತಿಜ್ಞೆ ಮಾಡಲಾಯಿತು. ಇದಾದ ನಂತರ ಜಿಲ್ಲಾ ಶಿಕ್ಷಣಾಧಿಕಾರಿಗಳು ಆರೋಪಿ ಮುಖ್ಯ ಶಿಕ್ಷಕ ರತನ್‌ಲಾಲ್ ಸರೋವರ್ ಅವರನ್ನು ಅಮಾನತುಗೊಳಿಸಿದ್ದಾರೆ. ಆರೋಪಿ ಶಿಕ್ಷಕನನ್ನು ಭರಾರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರನ್ನಾಗಿ ನಿಯೋಜಿಸಲಾಗಿತ್ತು.

ಹಿಂದೂ ಸಂಘಟನೆಯೊಂದರ ಪದಾಧಿಕಾರಿ ರೂಪೇಶ್ ಶುಕ್ಲಾ ಎಂಬುವರು ಹೆಡ್ ಮಾಸ್ಟರ್ ವಿರುದ್ಧ ದೂರು ದಾಖಲಿಸಿದ್ದು, ಅದರಲ್ಲಿ ಶಿವ, ರಾಮ, ಕೃಷ್ಣ ಸೇರಿದಂತೆ ಹಿಂದೂ ದೇವತೆಗಳನ್ನು ಪೂಜಿಸುವುದಿಲ್ಲ ಮತ್ತು ಬೌದ್ಧ ಧರ್ಮವನ್ನು ಅನುಸರಿಸುವುದಾಗಿ ಪ್ರಮಾಣ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ, ಅವರ ಈ ಕ್ರಮ ಸನಾತನ ಧರ್ಮದಲ್ಲಿ ನಂಬಿಕೆ ಇರುವ ಜನರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ದೂರಿನ ಆಧಾರದ ಮೇಲೆ, ಅವರ ವಿರುದ್ಧ ಐಪಿಸಿ ಸೆಕ್ಷನ್ 153A (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕದಡುವ, ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295A (ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com