ಅರವಿಂದ್ ಕೇಜ್ರಿವಾಲ್
ದೇಶ
ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 5ನೇ ಬಾರಿ ಇಡಿ ಸಮನ್ಸ್ ಜಾರಿ
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಐದನೇ ಬಾರಿ...
ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಐದನೇ ಬಾರಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರಿಗೆ ಶುಕ್ರವಾರ, ಫೆಬ್ರವರಿ 2 ರಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
55 ವರ್ಷದ ಕೇಜ್ರಿವಾಲ್ ಅವರು ಜನವರಿ 18, ಜನವರಿ 3, ಕಳೆದ ವರ್ಷ ನವೆಂಬರ್ 2 ಮತ್ತು ಡಿಸೆಂಬರ್ 2 ರಂದು ಕೇಂದ್ರ ತನಿಖಾ ಸಂಸ್ಥೆ ನಾಲ್ಕು ಸಮನ್ಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು.
ನಾಲ್ಕು ಬಾರಿ ವಿಚಾರಣೆಗೆ ಗೈರು ಆಗಿರುವ ಕೇಜ್ರಿವಾಲ್ ಅವರು ತಮಗೆ ನೀಡಿರುವ ನೋಟಿಸ್ ಕಾನೂನು ಬಾಹಿರ ಎಂದು ಈ ಹಿಂದೆ ಲಿಖಿತ ಉತ್ತರ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ