ಪಶ್ಚಿಮ ಬಂಗಾಳ: 'ಭಾರತ್ ಜೋಡೋ ನ್ಯಾಯ್ ಯಾತ್ರೆ' ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸೆತ, ಕಾಂಗ್ರೆಸ್ ತೀವ್ರ ಖಂಡನೆ

'ಭಾರತ್ ಜೋಡೋ ನ್ಯಾಯ್ ಯಾತ್ರೆ' ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಇಂದು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ರಾಹುಲ್ ಗಾಂಧಿ ಯಾತ್ರೆ ಸಂದರ್ಭದಲ್ಲಿ (ಸಂಗ್ರಹ ಚಿತ್ರ)
ರಾಹುಲ್ ಗಾಂಧಿ ಯಾತ್ರೆ ಸಂದರ್ಭದಲ್ಲಿ (ಸಂಗ್ರಹ ಚಿತ್ರ)

ಕೋಲ್ಕತ್ತಾ: 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಇಂದು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಘಟನೆಯಲ್ಲಿ ವಾಹನದ ಹಿಂಬದಿಯ ಕಿಟಕಿ ಗಾಜು ಜಖಂಗೊಂಡಿದ್ದರೂ ರಾಹುಲ್ ಗಾಂಧಿಗೆ ಯಾವುದೇ ಗಾಯವಾಗಿಲ್ಲ. ಯಾತ್ರೆ ಗೊತ್ತುಪಡಿಸಿದ ಸ್ಥಳಕ್ಕೆ ತಲುಪಿದ ನಂತರ ಕಾರಿನ ಹಾನಿಗೀಡಾದ ಕಿಟಕಿಗಳನ್ನು ಪರೀಕ್ಷಿಸಿದ ರಾಹುಲ್ ಗಾಂಧಿ ವಾಹನದಿಂದ ಕೆಳಗಿಳಿಯುತ್ತಿರುವ ದೃಶ್ಯ ಕಾಣಬಹುದು.  ಯಾತ್ರೆ ಬಿಹಾರದಿಂದ ಪಶ್ಚಿಮ ಬಂಗಾಳಕ್ಕೆ ಮರು ಪ್ರವೇಶಿಸುತ್ತಿದ್ದಂತೆ ಮಾಲ್ಡಾದ ಹರಿಶ್ಚಂದ್ರಪುರ ಪ್ರದೇಶದಲ್ಲಿ ದಾಳಿ ನಡೆದಿದೆ.

ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಾಹನದ ಹಿಂಬದಿಯ ಕಿಟಕಿ ಗಾಜನ್ನು ಕಲ್ಲು ತೂರಾಟದ ನಂತರ ಒಡೆದು ಹಾಕಲಾಗಿದೆ. ಇದು ಅಕ್ಷಮ್ಯ ಅಪರಾಧ ನಡೆ, ಇಂತಹ ಕ್ರಮಗಳನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು  ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com