Hathras stampede: ಘಟನೆಯ ತನಿಖೆ ಮತ್ತು ಸಂತ್ರಸ್ತರಿಗೆ ಪರಿಹಾರಕ್ಕಾಗಿ ಸಮಿತಿಯನ್ನು ನೇಮಿಸಲು ಸುಪ್ರೀಂ ಕೋರ್ಟ್ ನಲ್ಲಿ PIL

ಸಾರ್ವಜನಿಕ ಸಭೆಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳನ್ನು ಸೂಚಿಸಲು ಮತ್ತು ರೂಪಿಸಲು ಸಮಿತಿಗೆ ನಿರ್ದೇಶನ ನೀಡುವಂತೆ ವಕೀಲರು ಅರ್ಜಿಯಲ್ಲಿ ಕೋರಿದ್ದಾರೆ.
ಹತ್ರಾಸ್ ಕಾಲ್ತುಳಿತಕ್ಕೆ ಬಲಿಯಾದವರ ದೇಹಗಳು ಬಾಗ್ಲಾ ಜಿಲ್ಲಾಸ್ಪತ್ರೆಯಲ್ಲಿ
ಹತ್ರಾಸ್ ಕಾಲ್ತುಳಿತಕ್ಕೆ ಬಲಿಯಾದವರ ದೇಹಗಳು ಬಾಗ್ಲಾ ಜಿಲ್ಲಾಸ್ಪತ್ರೆಯಲ್ಲಿ
Updated on

ನವದೆಹಲಿ: 122 ಜನರ ಸಾವಿಗೆ ಕಾರಣವಾದ ಹತ್ರಾಸ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಐವರು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸಲು ತಕ್ಷಣದ ನಿರ್ದೇಶನ ಸೇರಿದಂತೆ ಹಲವಾರು ಆದೇಶಗಳನ್ನು ಕೋರಿ ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (PIL) ಸಲ್ಲಿಸಿದ್ದಾರೆ.

ಸಾರ್ವಜನಿಕ ಸಭೆಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳನ್ನು ಸೂಚಿಸಲು ಮತ್ತು ರೂಪಿಸಲು ಸಮಿತಿಗೆ ನಿರ್ದೇಶನ ನೀಡುವಂತೆ ವಕೀಲರು ಅರ್ಜಿಯಲ್ಲಿ ಕೋರಿದ್ದಾರೆ. ಇಷ್ಟು ದೊಡ್ಡ ದುರಂತಕ್ಕೆ ಕಾರಣರಾದ ಸಂಘಟಕರು ಮತ್ತು ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಡಳಿತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಹತ್ರಾಸ್ ಕಾಲ್ತುಳಿತಕ್ಕೆ ಬಲಿಯಾದವರ ದೇಹಗಳು ಬಾಗ್ಲಾ ಜಿಲ್ಲಾಸ್ಪತ್ರೆಯಲ್ಲಿ
Hathras stampede: ಅನುಮತಿ ಪಡೆದಿದ್ದು 80 ಸಾವಿರ ಜನಕ್ಕೆ, ಸೇರಿದ್ದು 2 ಲಕ್ಷಕ್ಕೂ ಅಧಿಕ ಮಂದಿ!

ಹತ್ರಾಸ್ ಕಾಲ್ತುಳಿತದ ಕುರಿತು ಸುಪ್ರೀಂ ಕೋರ್ಟ್‌ಗೆ ಸ್ಥಿತಿ ವರದಿಯನ್ನು ಸಲ್ಲಿಸಲು ಉತ್ತರ ಪ್ರದೇಶ ರಾಜ್ಯಕ್ಕೆ ನಿರ್ದೇಶನ ನೀಡುವಂತೆ ಮತ್ತು ಸಾರ್ವಜನಿಕವಾಗಿ ಧಾರ್ಮಿಕ ಅಥವಾ ಇತರ ಕಾರ್ಯಕ್ರಮಗಳಂತಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವವರ ಸುರಕ್ಷತೆಗಾಗಿ ಕಾಲ್ತುಳಿತವನ್ನು ತಡೆಗಟ್ಟಲು ಮಾರ್ಗಸೂಚಿಗಳನ್ನು ಹೊರಡಿಸಲು ರಾಜ್ಯಕ್ಕೆ ನಿರ್ದೇಶನ ನೀಡುವಂತೆ ಅವರು ಕೋರಿದ್ದಾರೆ.

ನೂರಾರು ಜೀವಗಳನ್ನು ಬಲಿತೆಗೆದುಕೊಂಡ 1954ರ ಕುಂಭಮೇಳ ಕಾಲ್ತುಳಿತ ಸೇರಿದಂತೆ ಹಿಂದಿನ ಘಟನೆಗಳನ್ನು ಅರ್ಜಿಯಲ್ಲಿ ಅವರು ವಿವರಿಸಿದ್ದಾರೆ.

ಸೂಕ್ತ ಭದ್ರತಾ ಸೌಲಭ್ಯಗಳು ಮತ್ತು ವ್ಯವಸ್ಥೆಗಳನ್ನು ಮಾಡದ ಕಾರಣ ಹತ್ರಾಸ್ ಘಟನೆ ಸಂಭವಿಸಿದೆ ಎಂದು ವಕೀಲ ವಿಶಾಲ್ ತಿವಾರಿ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com