
ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಇಂದು ಹೇಮಂತ್ ಸೊರೆನ್ ಅವರನ್ನು ನಿಯೋಜಿತ ಮುಖ್ಯಮಂತ್ರಿಯಾಗಿ ನೇಮಿಸಿದ್ದು, ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ.
ಜುಲೈ 4 ರಂದು ಸಂಜೆ 5 ಗಂಟೆಗೆ ಸೊರೆನ್ ಅವರು ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕು ಮುನ್ನ ಜುಲೈ 7 ರಂದು ಸೊರೆನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ನಂತರ ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಜೆಎಂಎಂ ಮೂಲಗಳು ತಿಳಿಸಿವೆ.
ರಾಜಭವನದ ಮೂಲಗಳ ಪ್ರಕಾರ, ರಾಜ್ಯಪಾಲರು ಸೊರೆನ್ ಅವರನ್ನು 12:30 ಕ್ಕೆ ರಾಜಭವನಕ್ಕೆ ಕರೆದು ಸರ್ಕಾರ ರಚಿಸಲು ಆಹ್ವಾನಿಸಿದರು. ಹೇಮಂತ್ ಸೊರೆನ್ ಅವರ ಪತ್ನಿ ಮತ್ತು ಶಾಸಕಿ ಕಲ್ಪನಾ ಸೊರೆನ್, ಸಿಪಿಐಎಂಎಲ್ ಶಾಸಕ ವಿನೋದ್ ಸಿಂಗ್, ಆರ್‌ಜೆಡಿ ಶಾಸಕ ಸತ್ಯಾನಂದ ಭೋಕ್ತಾ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಜೊತೆಗಿದ್ದರು.
ರಾಜ್ಯಪಾಲರಿಂದ ಆಹ್ವಾನ ಸ್ವೀಕರಿಸಿದ ನಂತರ ಸಾಮಾಜಿಕ ಮಾಧ್ಯಮ X ನಲ್ಲಿ ಸಂತೋಷ ವ್ಯಕ್ತಪಡಿಸಿದ ಕಲ್ಪನಾ ಸೊರೆನ್, ಅಂತಿಮವಾಗಿ ಪ್ರಜಾಪ್ರಭುತ್ವವು ಗೆದ್ದಿದೆ ಎಂದು ಹೇಳಿದ್ದಾರೆ.
"31 ಜನವರಿ 2024 ರಂದು ಪ್ರಾರಂಭವಾದ ಅನ್ಯಾಯವು ಈಗ ನಿಜವಾದ ಅರ್ಥದಲ್ಲಿ ನ್ಯಾಯವನ್ನು ಪಡೆಯುವ ಸಮಯ ಪ್ರಾರಂಭಿಸಿದೆ" ಎಂದು ಕಲ್ಪನಾ ಸೊರೆನ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.
Advertisement