
ಜೈಪುರ: ರಾಜಸ್ಥಾನ ಬಿಜೆಪಿ ನಾಯಕ ಕಿರೋಡಿ ಲಾಲ್ ಮೀನಾ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅವರ ಆಪ್ತರು ಗುರುವಾರ ತಿಳಿಸಿದ್ದಾರೆ.
ಇತ್ತೀಚಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, ಮೀನಾ(72) ಅವರು ತಮ್ಮ ಜವಾಬ್ದಾರಿಯಲ್ಲಿರುವ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಯಾವುದೇ ಒಂದು ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡರೆ ತಾವು ಸಚಿವ ಸ್ಥಾನ ತ್ಯಜಿಸುವುದಾಗಿ ಹೇಳಿದ್ದರು.
ಮೀನಾ ಅವರ ಸ್ವಕ್ಷೇತ್ರ ದೌಸಾ ಸೇರಿದಂತೆ ಕೆಲವು ಸ್ಥಾನಗಳಲ್ಲಿ ಪಕ್ಷ ಸೋಲು ಅನುಭವಿಸಿದ್ದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
"ಕಿರೋಡಿ ಮೀನಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು 10 ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ರಾಜೀನಾಮೆ ನೀಡಿದ್ದಾರೆ" ಎಂದು ಅವರ ಆಪ್ತರು ಹೇಳಿದ್ದಾರೆ.
ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು.
Advertisement