
ಥಾಣೆ: ಮಹಾರಾಷ್ಟ್ರದ ಥಾಣೆಯ ಮುಂಬ್ರಾ ಖಾದಿ ಮೆಷಿನ್ ಅಣೆಕಟ್ಟಿನ ಸಮೀಪ ಬೆಟ್ಟದಲ್ಲಿ ಸಿಲುಕಿದ್ದ ಐವರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ತಂಡಗಳು, ಏಡಿ ಹಿಡಿಯುವ ವೇಳೆ ಬೆಟ್ಟದಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಿದ್ದಾರೆ.
ನಿನ್ನೆ ರಾತ್ರಿ 8:30ರ ಸುಮಾರಿಗೆ ಕೆಲವು ಮಕ್ಕಳು ಬೆಟ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಮಗೆ ಕರೆ ಬಂದಿತ್ತು ಎಂದು ಅಗ್ನಿಶಾಮಕ ಅಧಿಕಾರಿ ಗಣೇಶ ಕೇದಾರೆ ತಿಳಿಸಿದ್ದಾರೆ.
ನಮ್ಮ ತಂಡವು ತಕ್ಷಣ ಸ್ಥಳಕ್ಕೆ ತಲುಪಿದ್ದು, ಎಲ್ಲಾ ಐದು ಮಕ್ಕಳನ್ನು ರಕ್ಷಿಸಲಾಗಿದೆ ಮತ್ತು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕೇದಾರೆ ಹೇಳಿದ್ದಾರೆ.
Advertisement