ಅಬಕಾರಿ ನೀತಿ ಹಗರಣ: ಮನೀಶ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಜುಲೈ 15ರವರೆಗೆ ವಿಸ್ತರಣೆ

ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮನೀಶ್‌ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್‌ 9ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
Manish Sisodia
ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.

ವಿಶೇಷ ನ್ಯಾಯಾಧೀಶೆ ಕಾವೇರಿ ಬಾವೇಜಾ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು.

ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮನೀಶ್‌ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್‌ 9ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

Manish Sisodia
ಅಬಕಾರಿ ನೀತಿ ಪ್ರಕರಣ: ಜುಲೈ 12 ರವರೆಗೆ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶುಕ್ರವಾರ 9ನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ವಿನೋದ್ ಚೌಹಾನ್ ಎನ್ನುವ ವ್ಯಕ್ತಿಯನ್ನು ಆರೋಪಿ ಎಂದು ಹೆಸರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಕರಣದ ತನಿಖೆಯ ಭಾಗವಾಗಿ ಚೌಹಾನ್ ಅವರನ್ನು ಮೇ ತಿಂಗಳಲ್ಲಿ ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್, ಬಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ, ಉದ್ಯಮಿಗಳು ಸೇರಿದಂತೆ ಹಲವರನ್ನು ಬಂಧಿಸಿದ್ದು, ಚೌಹಾನ್ ಈ ಸಂಬಂಧ ಬಂಧನಕ್ಕೊಳಗಾದ 18ನೇ ಆರೋಪಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com