ಆಮ್ ಆದ್ಮಿ ಪಕ್ಷದ ಸತ್ಯೇಂದ್ರ ಜೈನ್ ವಿರುದ್ಧ ಲಂಚ ಆರೋಪ: ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಒಪ್ಪಿಗೆ

ಆಮ್ ಆದ್ಮಿ ಪಕ್ಷದ ಸತ್ಯೇಂದ್ರ ಜೈನ್ ವಿರುದ್ಧ ಲಂಚ ಆರೋಪದ ಪ್ರಕರಣದ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ ನೀಡಿದ್ದಾರೆ.
ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದ್ರ ಜೈನ್
Former AAP Minister Satyendar Jain moves default bail in Delhi HConline desk
Updated on

ನವದೆಹಲಿ: ಆಮ್ ಆದ್ಮಿ ಪಕ್ಷದ ಸತ್ಯೇಂದ್ರ ಜೈನ್ ವಿರುದ್ಧ ಲಂಚ ಆರೋಪದ ಪ್ರಕರಣದ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ ನೀಡಿದ್ದಾರೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನ ಅಧಿಕಾರಿಯೊಬ್ಬರಿಂದ 7 ಕೋಟಿ ರೂಪಾಯಿ ಲಂಚ ಸ್ವೀಕರಿಸಿದ ಆರೋಪ ಸತ್ಯೇಂದ್ರ ಜೈನ್ ವಿರುದ್ಧ ಇದ್ದು, ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಈ ಪ್ರಕರಣದ ತನಿಖೆ ನಡೆಸಲಿದೆ.

ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದ್ರ ಜೈನ್
ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!

ಲೆಫ್ಟಿನೆಂಟ್ ಗವರ್ನರ್ ಆದೇಶದ ಪ್ರಕಾರ, ಎಎಪಿ ನಾಯಕನನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ನಡೆಸಲಾಗುತ್ತದೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದ ಬಿಇಎಲ್‌ಗೆ ವಿಧಿಸಲಾಗಿದ್ದ 16 ಕೋಟಿ ರೂ.ಗಳ ದಂಡವನ್ನು ಮನ್ನಾ ಮಾಡಲು ದೆಹಲಿಯ ಮಾಜಿ ಸಚಿವರು ಲಂಚವನ್ನು ಸ್ವೀಕರಿಸಿದ್ದರು. ಯೋಜನೆಯು 571 ಕೋಟಿ ರೂ ಮೊತ್ತದ್ದಾಗಿತ್ತು.

ಎಸಿಬಿಯಿಂದ ಜೈನ್ ವಿರುದ್ಧದ ತನಿಖೆಯನ್ನು ಅನುಮೋದಿಸಲು ಭ್ರಷ್ಟಾಚಾರ ತಡೆ (ಪಿಒಸಿ) ಕಾಯಿದೆ, 1998 ರ ಸೆಕ್ಷನ್ 17 ಎ ಅಡಿಯಲ್ಲಿ ಕೇಂದ್ರ ಗೃಹ ಸಚಿವಾಲಯಕ್ಕೆ ವಿಷಯವನ್ನು ಉಲ್ಲೇಖಿಸಲಾಗಿದ್ದು, ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯದ ಪ್ರಸ್ತಾವನೆಯನ್ನು ಎಲ್‌ಜಿ ಒಪ್ಪಿಗೆ ನೀಡಿದ್ದಾರೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com