
ಹೈದರಾಬಾದ್: ತೆಲಂಗಾಣ- ಆಂಧ್ರಪ್ರದೇಶ ಮುಖ್ಯಮಂತ್ರಿಗಳು 4 ವರ್ಷಗಳಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದು, ರಾಜ್ಯ ವಿಭಜನೆಯ ನಂತರದ ವಿಷಯಗಳನ್ನು ಬಗೆಹರಿಸಿಕೊಳ್ಳುವುದರ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
ರಾಜ್ಯಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿ ರಚನೆಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.
ಮಹಾತ್ಮಾ ಜ್ಯೋತಿರಾವ್ ಫುಲೆ ಪ್ರಜಾ ಭವನದಲ್ಲಿ ಚಂದ್ರಬಾಬು ನಾಯ್ಡು- ರೇವಂತ್ ರೆಡ್ಡಿ ನೇತೃತ್ವದಲ್ಲಿ ಉಭಯ ರಾಜ್ಯಗಳ ನಿಯೋಗಗಳು ಮತ್ತು ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕಳೆದ 10 ವರ್ಷಗಳಿಂದ ಬಾಕಿ ಉಳಿದಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ.
ಅಧಿಕಾರಿಗಳ ಸಮಿತಿಯಿಂದ ಪರಿಹರಿಸಲಾಗದ ಸಮಸ್ಯೆಗಳನ್ನು ಸಚಿವರ ಸಮಿತಿಗೆ ಕಳುಹಿಸಲಾಗುವುದು. ಸಚಿವರ ಸಮಿತಿಯೂ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾದರೆ ಮತ್ತೊಮ್ಮೆ ಮುಖ್ಯಮಂತ್ರಿಗಳ ಸಭೆ ನಡೆಸಿ ಬಗೆಹರಿಸಲಾಗುವುದು ಎಂದು ತೆಲಂಗಾಣ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.
Advertisement