
ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿಯಲ್ಲಿ ಸೇನಾ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಕನಿಷ್ಠ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕಥುವಾದಿಂದ 150 ಕಿಲೋಮೀಟರ್ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದಲ್ಲಿ ಸೇನಾ ವಾಹನಗಳು ಗಸ್ತು ತಿರುಗುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಎನ್ ಕೌಂಟರ್ ನಡೆಯುತ್ತಿದೆ. ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ರವಾನಿಸಲಾಗಿದೆ. ಹೆಚ್ಚಿನ ವಿವರ ತಿಳಿದುಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement