
ಮುಂಬೈ: BMW ಹಿಟ್ ಅಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬುಧವಾರ ಭರವಸೆ ನೀಡಿದ್ದಾರೆ ಮತ್ತು ಮೃತ ಮಹಿಳೆಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಅಪಘಾತ ಪ್ರಕರಣದ ಪ್ರಮುಖ ಆರೋಪಿ ತಮ್ಮ ಪಕ್ಷದ ನಾಯಕನ ಮಗ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮಹಾ ಸಿಎಂ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮತ್ತು ಯಾರನ್ನೂ ಬಿಡುವುದಿಲ್ಲ ಎಂದರು.
"ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು". ಸಂತ್ರಸ್ತೆ ಕುಟುಂಬಕ್ಕೆ ನಾವು ಬೆಂಬಲ ನೀಡುತ್ತೇವೆ, ನೊಂದ ಕುಟುಂಬಕ್ಕೆ ಕಾನೂನು ಮತ್ತು ಆರ್ಥಿಕ ನೆರವು ನೀಡುತ್ತೇವೆ. ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ನೆರವು ನೀಡುತ್ತೇವೆ. ಅವರು ಸಹ ನಮ್ಮ ಕುಟುಂಬದವರು ಎಂದು ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಪಘಾತ ಪ್ರಕರಣದ ಪ್ರಮುಖ ಆರೋಪಿ, ಆಡಳಿತಾರೂಢ ಶಿವಸೇನೆ ನಾಯಕ ರಾಜೇಶ್ ಶಾ ಅವರ ಪುತ್ರ 24 ವರ್ಷದ ಮಿಹಿರ್ ಶಾ ಚಲಾಯಿಸುತ್ತಿದ್ದ ಕಾರು ಭಾನುವಾರ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ಮಹಿಳೆ ಸಾವಿಗೀಡಾಗಿದ್ದರು. ನಂತರ ಮಿಹಿರ್ ಶಾ ತಲೆಮರೆಸಿಕೊಂಡಿದ್ದರು. ಆದರೆ ಮೂರು ದಿನಗಳ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Advertisement