ವಿಚ್ಛೇದಿತ ಮುಸ್ಲಿಂ ಮಹಿಳೆಗೂ ಜೀವನಾಂಶದ ಹಕ್ಕು: Supreme Court ಮಹತ್ವದ ಆದೇಶ

ಸೆಕ್ಷನ್ 125 CrPC ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ ಮತ್ತು ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶಕ್ಕಾಗಿ ಈ ನಿಬಂಧನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
Muslim women entitled to alimony on divorce: Supreme Court
ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೂ ಜೀವನಾಂಶದ ಹಕ್ಕು

ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೂ ಜೀವನಾಂಶದ ಹಕ್ಕು ಅನ್ವಯಿಸುತ್ತದೆ ಎಂದು ಬುಧವಾರ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪತ್ನಿಯ ಜೀವನಾಂಶದ ಕಾನೂನುಬದ್ಧ ಹಕ್ಕನ್ನು ವ್ಯವಹರಿಸುವ ಸೆಕ್ಷನ್ 125 CrPC ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ ಮತ್ತು ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶಕ್ಕಾಗಿ ಈ ನಿಬಂಧನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

Muslim women entitled to alimony on divorce: Supreme Court
ಕೋರ್ಟ್ ಮೂಲಕ ಮಾತ್ರ ಮುಸ್ಲಿಂ ಮಹಿಳೆ ವಿಚ್ಛೇದನಕ್ಕೆ ಅರ್ಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಬೇರೆ ರೀತಿಯಲ್ಲಿ ಹೇಳುವುದಾದರೆ, ವಿಚ್ಛೇದನದ ನಂತರ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದ್ದು, ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ಜೀವನಾಂಶವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಿಆರ್‌ಪಿಸಿ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ವಜಾಗೊಳಿಸಿ ಈ ದೊಡ್ಡ ತೀರ್ಪು ಬಂದಿದೆ.

Muslim women entitled to alimony on divorce: Supreme Court
ಹಿಂದೂ ಮಹಿಳೆಯನ್ನು ಮುಸ್ಲಿಂ ವ್ಯಕ್ತಿ ಮದುವೆ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಅಕ್ರಮ: ಹೈಕೋರ್ಟ್

ಜೀವನಾಂಶವನ್ನು ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಪೀಠವು ಸ್ಪಷ್ಟಪಡಿಸಿದ್ದು, ನ್ಯಾಯಮೂರ್ತಿ ನಾಗರತ್ನ ಮತ್ತು ನ್ಯಾಯಮೂರ್ತಿ ಮಾಸಿಹ್ ಅವರು ಪ್ರತ್ಯೇಕ, ಆದರೆ ಏಕಕಾಲೀನ ತೀರ್ಪುಗಳನ್ನು ನೀಡಿದರು.

ನ್ಯಾಯಮೂರ್ತಿ ನಾಗರತ್ನ ಅವರು, "ಗೃಹಿಣಿಯಾಗಿರುವ ಹೆಂಡತಿ ಭಾವನಾತ್ಮಕವಾಗಿ ಮತ್ತು ಇತರ ರೀತಿಯಲ್ಲಿ ಅವಲಂಬಿತಳಾಗಿದ್ದಾಳೆ ಎಂಬ ಅಂಶದ ಬಗ್ಗೆ ಕೆಲವು ಗಂಡಂದಿರಿಗೆ ಪ್ರಜ್ಞೆಯೇ ಇರುವುದಿಲ್ಲ. ಭಾರತೀಯ ಪುರುಷನು ಗೃಹಿಣಿಯ ಪಾತ್ರ-ತ್ಯಾಗವನ್ನು ಗುರುತಿಸಬೇಕಾದ ಸಮಯ ಬಂದಿದೆ ಎಂದು ಅಭಿಪ್ರಾಯಪಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com