
ಡೆಹ್ರಾಡೂನ್: ಉತ್ತರಾಖಂಡದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯ ಪಾತಾಳಗಂಗಾ ಲಾಂಗ್ಸಿ ಸುರಂಗದ ಬಳಿ ಭೂಕುಸಿತ ಸಂಭವಿಸಿದ್ದು, ಈ ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪಾತಾಳಗಂಗಾ ಲ್ಯಾಂಗ್ಸಿ ಸುರಂಗದ ಬಳಿ ಈ ಬೃಹತ್ ಭೂಕುಸಿತ ಸಂಭವಿಸಿದ್ದು ಪರಿಣಾಮ ಉತ್ತರಾಖಂಡದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.
ಭೂಕುಸಿತದಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಚಮೋಲಿ ಪೊಲೀಸರು ಭೂಕುಸಿತದ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರಸ್ತೆ ಬಂದ್ ಆಗಿರುವ ಕಾರಣ ಜನರು ತಾಳ್ಮೆಯಿಂದ ಇರುವಂತೆ ಚಮೋಲಿ ಪೊಲೀಸರು ಮನವಿ ಮಾಡಿದ್ದು, ಈ ಭೂಕುಸಿತದಿಂದ ಯಾವುದೇ ಸಾವುನೋವುಗಳ ಕುರಿತು ವರದಿಯಾಗಿಲ್ಲ ಎನ್ನಲಾಗಿದೆ.
ಮಂಗಳವಾರ ಜೋಶಿಮಠದ ಬಳಿ ಭೂಕುಸಿತ ಉಂಟಾಗಿ ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆ ಉಂಟಾಗಿತ್ತು. ಕಳೆದ ಎರಡು ದಿನಗಳಿಂದ ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸತತ ಭೂ ಕುಸಿತ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Advertisement