ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸ್ಫೋಟ, ಶೋಧ ಕಾರ್ಯಾಚರಣೆ!

ಬುಧವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ತಡರಾತ್ರಿ ಲಾಮ್ ಸೆಕ್ಟರ್‌ನಲ್ಲಿ ಎಲ್‌ಒಸಿಯಾದ್ಯಂತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ವರದಿಯಾಗಿದೆ. ಈ ಸಮಯದಲ್ಲಿ ಶೂನ್ಯ ರೇಖೆ ಸಮೀಪದಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ
ಭದ್ರತಾ ಸಿಬ್ಬಂದಿ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ಧಕ್ಕೂ (ಎಲ್‌ಒಸಿ) ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ತಡರಾತ್ರಿ ಲಾಮ್ ಸೆಕ್ಟರ್‌ನಲ್ಲಿ ಎಲ್‌ಒಸಿಯಾದ್ಯಂತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ವರದಿಯಾಗಿದೆ. ಈ ಸಮಯದಲ್ಲಿ ಶೂನ್ಯ ರೇಖೆ ಸಮೀಪದಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ
ಜಮ್ಮು: ಕಥುವಾದಲ್ಲಿ ಉಗ್ರರ ಹೊಂಚು ದಾಳಿ; 5 ಯೋಧರು ಹುತಾತ್ಮ, 6 ಮಂದಿಗೆ ಗಾಯ

ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಗುರುವಾರ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬನನ್ನು ಸೇನಾ ಸಿಬ್ಬಂದಿ ಬಂಧಿಸಿದ್ದಾರೆ. ಫಗ್ವಾರಿ ಪ್ರದೇಶದಿಂದ ಬೆಳಗ್ಗೆ 11 ಗಂಟೆ ಸುಮಾರಿಗೆ ಆತನನ್ನು ಬಂಧಿಸಿ ಮುಂದಿನ ಕ್ರಮಕ್ಕಾಗಿ ಮಲಿಕ್‌ಪುರದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com