ವಿಶಾಖಪಟ್ಟಣ: ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ, ಪರಿಶೀಲನೆ

ವೈಜಾಗ್ ಸ್ಟೀಲ್ ಕಾರ್ಖಾನೆ ಆರ್ಥಿಕ ಮತ್ತಿತರ ಕಾರಣಗಳಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕಂಪನಿಯ ಪುನಶ್ಚೇತನಕ್ಕೆ ಕುಮಾರಸ್ವಾಮಿ ಪ್ರಯತ್ನ ನಡೆಸುತ್ತಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಮತ್ತಿತರರು
ಹೆಚ್.ಡಿ.ಕುಮಾರಸ್ವಾಮಿ ಮತ್ತಿತರರು

ವಿಶಾಖಪಟ್ಟಣ: ಕೇಂದ್ರ ಸರಕಾರದ ಉಕ್ಕು ಸಚಿವಾಲಯದ ಅಧೀನದಲ್ಲಿರುವ ವಿಶಾಖಪಟ್ಟಣದ ವೈಜಾಗ್ ಸ್ಟೀಲ್ (Rashtriya Ispat Nigam-RINL) ಕಾರ್ಖಾನೆಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಇಂದು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಇಡೀ ಕಾರ್ಖಾನೆಯ ವಿವಿಧ ವಿಭಾಗಗಳಿಗೆ ತೆರಳಿ ಮಾಹಿತಿ ಪಡೆದದರು. ಅಲ್ಲದೇ ಉತ್ಪಾದನಾ ಚಟುವಟಿಕೆಗಳನ್ನು ಪರಿಶೀಲಿಸಿ ಕಾರ್ಮಿಕರ ಜತೆ ಸಂವಾದ ನಡೆಸಿದರು.

ಹೆಚ್.ಡಿ.ಕುಮಾರಸ್ವಾಮಿ ಮತ್ತಿತರರು
ಭದ್ರಾವತಿ ವಿಶ್ವೇಶ್ವರಯ್ಯ ಐರನ್ ಅ್ಯಂಡ್ ಸ್ಟೀಲ್ ಲಿಮಿಟೆಡ್ ಪುನಶ್ಚೇತನಕ್ಕೆ ಕ್ರಮ: ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ

ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ರಾಜ್ಯ ಸಚಿವ ಭೂಪತಿರಾಜ್ ಶ್ರೀನಿವಾಸ ವರ್ಮಾ, ವಿಶಾಖಪಟ್ಟಣ ಸಂಸದ ಶ್ರೀ ಭರತಂ, ಸ್ಥಳೀಯ ಶಾಸಕ ಪಲ್ಲಾ ಶ್ರೀನಿವಾಸ್, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅತುಲ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ವೈಜಾಗ್ ಸ್ಟೀಲ್ ಕಾರ್ಖಾನೆ ಆರ್ಥಿಕ ಮತ್ತಿತರ ಕಾರಣಗಳಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕಂಪನಿಯ ಪುನಶ್ಚೇತನಕ್ಕೆ ಕುಮಾರಸ್ವಾಮಿ ಪ್ರಯತ್ನ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com