
ಶ್ರಾವಸ್ತಿ: ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ದಲಿತ ಬಾಲಕನಿಗೆ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಮೂವರು ಯುವಕರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
15 ವರ್ಷ ವಯಸ್ಸಿನ ಸಂತ್ರಸ್ತ ತಂತ್ರಜ್ಞರಾಗಿ ಕೆಲಸ ಮಾಡುತ್ತಾರೆ. ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮದ್ಯದ ಅಮಲಿನಲ್ಲಿದ್ದ ಮೂವರು ಯುವಕರು ಆತನನ್ನು ಅಡ್ಡಗಟ್ಟಿದ್ದು, ಮದ್ಯದ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿ, ಅದನ್ನು ಸಂತ್ರಸ್ತನ ಬಾಯಿಗೆ ಇಟ್ಟು ಕುಡಿಯಲು ಒತ್ತಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆ ಮಾಡಿದ್ದಾರೆ. ಅವರಲ್ಲಿ ಒಬ್ಬರು ಇಡೀ ಘಟನೆಯ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ" ಎಂದು ಗಿಲೌಲಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಹಿಮಾ ನಾಥ್ ಉಪಾಧ್ಯಾಯ ಹೇಳಿದರು. ಸಂತ್ರಸ್ತ ಮನೆಗೆ ಬಂದು ವಿಷಯ ತಿಳಿಸಿದ ಮರುದಿನ ಆತನ ಪೋಷಕರು ಮತ್ತು ಸಹೋದರ ಪೊಲೀಸರಿಗೆ ದೂರು ನೀಡಿದ್ದರು. ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಆಧರಿಸಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ.
Advertisement