
ಅಯೋಧ್ಯೆ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ ವೈ ಚಂದ್ರಚೂಡ್ ಅವರು ಶುಕ್ರವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಜಿಲ್ಲಾಡಳಿತದ ಪ್ರಕಾರ, ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚಂದ್ರಚೂಡ್ ಅವರನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಅವರು ಬರಮಾಡಿಕೊಂಡರು.
ನಂತರ ಸಿಜೆಐ ಚಂದ್ರಚೂಡ್ ಅವರು ಹನುಮಾನ್‌ಗರ್ಹಿ ದೇವಸ್ಥಾನ ಮತ್ತು ರಾಮ ಮಂದಿರಕ್ಕೆ ಭೇಟಿ ನೀಡಿದರು.
ಈ ಕುರಿತು ಪಿಟಿಐ ಜೊತೆ ಮಾತನಾಡಿದ ನಿತೀಶ್ ಕುಮಾರ್, ಚಂದ್ರಚೂಡ್ ಅವರು ಸುಮಾರು ಎರಡೂವರೆ ಗಂಟೆಗಳ ಕಾಲ ಅಯೋಧ್ಯೆಯಲ್ಲಿದ್ದರು. ಅವರು ಸಂಜೆ 5:30 ಕ್ಕೆ ರಾಮಕಥಾ ಪಾರ್ಕ್ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಲಖನೌಗೆ ತೆರಳಿದರು ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement