
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಠಿಯಿಂದ ಸ್ಪರ್ಧಿಸಿ ಸೋಲು ಕಂಡಿರುವ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ವಿರುದ್ಧ ಅವಹೇಳನಕಾರಿ ಭಾಷೆ ಮತ್ತು ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ‘ಜೀವನದಲ್ಲಿ ಸೋಲು–ಗೆಲುವು ಸಾಮಾನ್ಯ. ಆದೇ ರೀತಿ ಸ್ಮೃತಿ ಇರಾನಿ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಬಾರದು. ಅಸಹ್ಯವಾಗಿ ವರ್ತಿಸುವುದನ್ನು ನಿಲ್ಲಿಸುವಂತೆ ನಾನು ಎಲ್ಲರಲ್ಲೂ ಮನವಿ ಮಾಡುತ್ತೇನೆ. ನಾವು ಮತ್ತೊಬ್ಬರನ್ನು ಅವಮಾನಿಸುವುದೆಂದರೆ ಅದು ದೌರ್ಬಲ್ಯದ ಸಂಕೇತವಾಗುತ್ತದೆಯೇ ಹೊರತು ನಮ್ಮ ಶಕ್ತಿಯಲ್ಲ ಎಂದು ಬರೆದುಕೊಂಡಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಒಟ್ಟು 797 ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಅವರ ಪೈಕಿ ಹಲವರು ಖ್ಯಾತನಾಮರ ವಿರುದ್ಧ ಗೆಲುವು ಸಾಧಿಸುವ ಮೂಲಕ ಗಮನ ಸೆಳೆದಿದ್ದಾರೆ. ಮತ್ತೆ ಕೆಲವರು ಅಚ್ಚರಿ ಎಂಬಂತೆ ಸೋಲು ಕಂಡಿದ್ದಾರೆ. ಆ ಪೈಕಿ ಉತ್ತರ ಪ್ರದೇಶದ ಅಮೇಥಿಯಿಂದ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಸ್ಪರ್ಧಿಸಿ ಸೋತಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡ ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಅವರು ದೆಹಲಿಯ ಲುಟಿಯನ್ಸ್‌ನ 28 ತುಘಲಕ್ ಕ್ರೆಸೆಂಟ್‌ನಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ್ದಾರೆ.
Advertisement