
ತಂಜಾವೂರು: ಜುಲೈ ಅಂತ್ಯದವರೆಗೆ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಕಾವೇರಿ ನದಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ಪಾಲನೆಗೆ ಕರ್ನಾಟಕ ಸರ್ಕಾರ ನಿರಾಕರಿಸಿರುವುದರಿಂದ ತಮಿಳುನಾಡಿನ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ತಂಜಾವೂರಿನ ಜಿಲ್ಲಾಧಿಕಾರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತದ ನದಿ ಜೋಡಣೆ ರೈತ ಸಂಘದ ಸದಸ್ಯರು ಕೈಯಲ್ಲಿ ಖಾಲಿ ಮಣ್ಣಿನ ಮಡಿಕೆಗಳೊಂದಿಗೆ ಧರಣಿ ನಡೆಸಿದರು. ನೀರು ಹಂಚಿಕೆಯಲ್ಲಿ ಸುಪ್ರೀಂಕೋರ್ಟ್ ಮತ್ತು CWRC ಆದೇಶದ ಬಗ್ಗೆ ಕರ್ನಾಟಕದ ಧೋರಣೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಸಿಡಬ್ಲ್ಯುಆರ್‌ಸಿ ಆದೇಶದಂತೆ ಕೂಡಲೇ ನೀರು ಬಿಡಬೇಕು, ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾಸಿಕ ವೇಳಾಪಟ್ಟಿಯಂತೆ ತಮಿಳುನಾಡಿಗೆ ನೀರು ಬಿಡಬೇಕು ಎಂದು ಅವರು ಒತ್ತಾಯಿಸಿದರು.
ತಮಿಳುನಾಡಿಗೆ ನೀರು ಬಿಡದ ಕಾರಣ ರೈತರು ಅನುಭವಿಸುತ್ತಿರುವ ನಷ್ಟಕ್ಕೆ ಕರ್ನಾಟಕ ಸರ್ಕಾರ ಪರಿಹಾರ ನೀಡಬೇಕು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ಗೆ ಮನವಿ ಮಾಡಿದರು. ಪ್ರತಿಭಟನಾ ನಿರತ ರೈತರೊಂದಿಗೆ ಜಿಲ್ಲಾಧಿಕಾರಿ ಮಾತುಕತೆ ನಡೆಸಿದ ಬಳಿಕ ಎರಡೂವರೆ ಗಂಟೆಗಳ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಯಿತುಯ
ಈ ಮಧ್ಯೆ ತಮಿಳುನಾಡು ರೈತ ಸಂಘದ ಸದಸ್ಯರು ತಂಜಾವೂರಿನ ಇರ್ವಿನ್ ಸೇತುವೆ ಬಳಿ ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. CWRC ಆದೇಶ ಪಾಲನೆ ನಿರಾಕರಿಸಿದ ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
Advertisement