
ಗೋಲಾಘಾಟ್: ಅಸ್ಸಾಂನ ವಿವಿಧ ಭಾಗಗಳಲ್ಲಿ ಸುಮಾರು 17.5 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಮತ್ತು ನಾಲ್ವರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಗೋಲಾಘಾಟ್ ಜಿಲ್ಲೆಯ ಎರಡು ವಿಭಿನ್ನ ಸ್ಥಳಗಳಲ್ಲಿ 1.73 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ಪೊಲೀಸ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಣಬ್ ಜ್ಯೋತಿ ಗೋಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ವಿಶೇಷ ಕಾರ್ಯಪಡೆ ತಂಡ, ಉರಿಯಮ್‌ಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಪುಕುರಿ ಪ್ರದೇಶದ ಮನೆಯೊಂದರ ಮೇಲೆ ಭಾನುವಾರ ದಾಳಿ ನಡೆಸಿತು ಎಂದು ಅವರು ಹೇಳಿದ್ದಾರೆ.
13 ಗ್ರಾಂ ಹೆರಾಯಿನ್ ಹೊಂದಿರುವ ಸೋಪ್ ಬಾಕ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಮನೆಯಲ್ಲಿದ್ದ ಇಬ್ಬರನ್ನು ಬಂಧಿಸಲಾಗಿದೆ ಎಂದು ಗೋಸ್ವಾಮಿ ತಿಳಿಸಿದ್ದಾರೆ.
"ವಿಚಾರಣೆಯ ಸಮಯದಲ್ಲಿ, ಬಂಧಿತ ಇಬ್ಬರು ವ್ಯಕ್ತಿಗಳು ಹತ್ತಿರದ ತಮ್ಮ ಸಹೋದರಿಯ ಮನೆಯಲ್ಲಿ ಹೆಚ್ಚಿನ ಹೆರಾಯಿನ್ ಅನ್ನು ಬಚ್ಚಿಟ್ಟಿರುವುದಾಗಿ ತಿಳಿಸಿದ್ದಾರೆ. ನಂತರ ಆ ಮನೆಯ ಮೇಲೆ ದಾಳಿ ನಡೆಸಲಾಯಿತು ಮತ್ತು 1.73 ಕೆಜಿ ಹೆರಾಯಿನ್ ಇದ್ದ 140 ಸೋಪ್ ಬಾಕ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಅವರು ಹೇಳಿದ್ದಾರೆ.
Advertisement